ಬೆಂಗಳೂರು: ದೀಪಾವಳಿಯಲ್ಲಿ ಹಸಿರು ಪಟಾಕಿ ಬದಲು ಇತರ ಪಟಾಕಿ ಸಿಡಿಸುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು, ವಿಪತ್ತು ನಿರ್ವಹಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ.
ಹಸಿರು ಪಟಾಕಿ ಹೊರತುಪಡಿಸಿ ಅನ್ಯ ಪಟಾಕಿ ಸಿಡಿಸಿದರೆ ಕ್ರಮ: ಮಂಜುನಾಥ್ ಪ್ರಸಾದ್ - ಪಟಾಕಿ ಸಿಡಿಸುವ ಹೊಸ ನಿಯಮ
ಈ ಬಾರಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಸರ್ಕಾರ ಪಟಾಕಿ ಮಾರಾಟ ಮತ್ತು ಹಚ್ಚುವ ಕುರಿತು ಸ್ಪಷ್ಟವಾದ ಮಾರ್ಗಸೂಚಿ ಹೊರಡಿಸಿದೆ. ಈ ನಿಯಮಗಳ ಆಧಾರದ ಮೇಲೆ ಪಟಾಕಿ ಮಾರಾಟ ಮಾಡುವವರಿಗೂ ಪರವಾನಗಿ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಪಟಾಕಿ ಸಿಡಿಸುವ ಹೊಸ ನಿಯಮಗಳ ಬಗ್ಗೆ ಪ್ರತಿಕ್ರಿಯಿಸಿ, ಕೊರೊನಾ ಸೋಂಕು ಹಬ್ಬುವ ಭೀತಿ ಹಾಗೂ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಈ ಬಾರಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಸರ್ಕಾರ ಪಟಾಕಿ ಮಾರಾಟ ಮತ್ತು ಹಚ್ಚುವ ಕುರಿತು ಸ್ಪಷ್ಟವಾದ ಮಾರ್ಗಸೂಚಿ ಹೊರಡಿಸಿದೆ. ಈ ನಿಯಮಗಳ ಆಧಾರದ ಮೇಲೆ ಪಟಾಕಿ ಮಾರಾಟ ಮಾಡುವವರಿಗೂ ಪರವಾನಗಿ ನೀಡಲಾಗುತ್ತಿದೆ ಎಂದರು.
ಪಾಲಿಕೆಯಿಂದ ಲೈಸೆನ್ಸ್ ಪಡೆದವರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು. ನಿಯಮ ಉಲ್ಲಂಘಿಸಿ ಅನ್ಯ ಪಟಾಕಿ ಮಾರಾಟ ಮಾಡಿದರೆ, ಮಾರಾಟಗಾರರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು.ಆದರೆ, ದಂಡ ವಿಧಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ ಎಂದರು.