ಬೆಂಗಳೂರು:ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಭೂತ ದಹನ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಸರ್ಕಾರ ಅಕ್ರಮವಾಗಿ ಕಾವೇರಿ ನದಿಗೆ ತಮಿಳುನಾಡಿನ ಎರಡು ನದಿಗಳ ಜೋಡಣೆ ಮಾಡಿರುವುದು ಅಪರಾಧ. ಕೇಂದ್ರ ಸರ್ಕಾರ ತಮಿಳುನಾಡಿಗೆ ಆರ್ಥಿಕ ನೆರವು ನೀಡಿರುವುದು ಸರಿಯಿಲ್ಲ. ಈ ಕೂಡಲೇ ಪ್ರಧಾನಮಂತ್ರಿ, ರಾಜ್ಯದ ಮುಖ್ಯಮಂತ್ರಿ ಮತ್ತು ಪಳನಿಸ್ವಾಮಿ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದ್ರು.