ಬೆಂಗಳೂರು:ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮೇಕೆದಾಟು ಯೋಜನೆ ವಿರುದ್ಧ ಕಾನೂನು ಬಾಹಿರ ನಿರ್ಣಯ ಕೈಗೊಂಡಿದ್ದು, ಇದನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿ ಬಗ್ಗೆ ನಮ್ಮ ನಿರ್ಧಾರ ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.