ಕರ್ನಾಟಕ

karnataka

ETV Bharat / state

ತರುಣ್ ಗೊಗೋಯ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರಿಂದ ಸಂತಾಪ - condolences of state congress leaders

ತರುಣ್ ಗೊಗೋಯ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆ ಹಾಗೂ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್​ ನಾಯಕರು ಸಂತಾಪ ಸೂಚಿಸಿದ್ದಾರೆ.

ತರುಣ್ ಗೊಗೋಯ್ ನಿಧನ
ತರುಣ್ ಗೊಗೋಯ್ ನಿಧನ

By

Published : Nov 23, 2020, 9:57 PM IST

ಬೆಂಗಳೂರು:ಅಸ್ಸಾಂನ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ತರುಣ್ ಗೊಗೋಯ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೋವಿಡ್-19 ಸೋಂಕಿಗೆ ಒಳಗಾಗಿ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷದ ತರುಣ್ ಗೊಗೋಯ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆ ಹಾಗೂ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರು ನಿಧನರಾಗಿದ್ದಾರೆ. ಹದಿನೈದು ವರ್ಷ ಅಸ್ಸಾಂನ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅವರು, ಆರು ಬಾರಿ ಸಂಸದರಾಗಿ ಆಯ್ಕೆಯಾಗಿ ಸುದೀರ್ಘ ಅವಧಿಯ ರಾಜಕೀಯ ಅನುಭವ ಹೊಂದಿದ್ದರು.

ಕಾಂಗ್ರೆಸ್ ನಾಯಕ ತರುಣ್ ಗೊಗೋಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಸಂತಾಪ ಸೂಚಿಸಿದ್ದಾರೆ. ತರುಣ್ ಗೊಗೋಯ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ಗೊಗೋಯ್ ಕುಟುಂಬ ಸದಸ್ಯರು ಮತ್ತು ಅವರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಓಂ ಶಾಂತಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್​​ ನಾಯಕರಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಸಚಿವ ಹೆಚ್.​​ಕೆ.ಪಾಟೀಲ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರ ನಾಯಕರು, ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ, ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್​ನ ಹಲವು ನಾಯಕರು ತರುಣ್ ಗೊಗೋಯ್ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details