ದೇವನಹಳ್ಳಿ (ಬೆಂ.ಗ್ರಾ):ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದ ಮುಂಭಾಗ ಟ್ಯಾಕ್ಸಿ ಚಾಲಕನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಜೆ 4:45ರ ಸುಮಾರಿಗೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದವನನ್ನು ಮಂಡ್ಯ ಮೂಲದ ಪ್ರತಾಪ್ (26) ಎಂದು ಗುರುತಿಸಲಾಗಿದೆ. ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಈತನಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಎಂಬ ಮಾಹಿತಿ ದೊರೆತಿದೆ.