ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕಿ ತಲೆ ಮೇಲೆ ಹರಿದ ಗೂಡ್ಸ್​ ವಾಹನ - ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು

ಬೆಂಗಳೂರಿನ ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Teacher died by road accident in Bangalore
ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು

By

Published : Jan 30, 2022, 4:34 PM IST

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ರಸ್ತೆ ಮೇಲೆ ಬಿದ್ದ ಶಿಕ್ಷಕಿ ಮೇಲೆ ಬೊಲೆರೋ ವಾಹನ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಭವಿಸಿದೆ. ಶರ್ಮಿಳಾ (38) ಮೃತ ಶಿಕ್ಷಕಿ.

ಇವರು ಶಾಲಾ ಶಿಕ್ಷಕಿ ಎಂದು ತಿಳಿದು ಬಂದಿದೆ. ಶಾಪಿಂಗ್​ ಎಂದು ಆ್ಯಕ್ಟಿವಾ​ ಹೋಂಡಾದಲ್ಲಿ ಹೊರ ಬಂದಿದ್ದರು. ಈ ವೇಳೆ ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿರುವಾಗ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಗಾಡಿ ವಾಲಿದ ಪರಿಣಾಮ ಮಹಿಳೆ ಕೆಳಗೆ ಬಿದ್ದಿದ್ದರು. ಇದೇ ವೇಳೆ ಹಿಂದಿನಿಂದ ಬಂದ ಗೂಡ್ಸ್​​ ವಾಹನ ಅವರ ತಲೆ ಮೇಲೆ ಹರಿದು ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರ ದುರ್ಮರಣ

ಪ್ರಕರಣ ಸಂಬಂಧ ಬೊಲೆರೋ ಚಾಲಕ ಮಾದೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಶಿಕ್ಷಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details