ಕರ್ನಾಟಕ

karnataka

ETV Bharat / state

ಶಿಕ್ಷಕರಾಗಲು ಬಯಸುವ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​.. TET ಪರೀಕ್ಷೆ ದಿನಾಂಕ ಘೋಷಣೆ - ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 20ರ ವರೆಗೆ ಅವಕಾಶವಿದೆ.

suresh kumar
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

By

Published : Jul 1, 2021, 6:24 PM IST

ಬೆಂಗಳೂರು: ಒಂದರಿಂದ ಎಂಟನೇ ತರಗತಿ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ. ಉತ್ತೀರ್ಣರಾಗಿರಬೇಕು. ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ. ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ, ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿ.ಇಡಿ, ಬಿಎಇಡಿ/ ಬಿಎಸ್ಸಿ ಬಿ.ಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 20 ಕೊನೆಯ ದಿನವಾಗಿದೆ. ಆಗಸ್ಟ್ 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತದೆ. ಪ್ರವೇಶ ಪತ್ರಗಳನ್ನು ದಿನಾಂಕ ಆಗಸ್ಟ್ 12ರಿಂದ ಆನ್​ಲೈನ್ ನಲ್ಲಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಮೈತ್ರಿ ಸರ್ಕಾರ ಕೆಡವಿದ ಆ 17 ಜನರಿಂದಲೇ ನನಗೆ ಒಳ್ಳೆಯದಾಗಿದೆ: ಹೆಚ್​.ಡಿ. ಕುಮಾರಸ್ವಾಮಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ABOUT THE AUTHOR

...view details