ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ ಸಂಬಂಧ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿ ದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಘಟನೆಯ ಬಗ್ಗೆ ತಿಳಿದುಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ನೀಡಿದ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ: ಮುಖ್ಯ ಶಿಕ್ಷಕಿ ಅಮಾನತು - children Toilet cleaning
Teacher suspended in children toilet cleaning case: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳ ಮೂಲಕ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣದಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
Published : Dec 22, 2023, 5:41 PM IST
ಪೋಷಕರು ಇಂದು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಸಚಿವರು ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸುವಂತೆ ಡಿಡಿಪಿಐಗೆ ಸೂಚಿಸಿದ್ದರು. ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಸ್ಥಳ ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಚಿವ ಮಧು ಬಂಗಾರಪ್ಪ