ಬೆಂಗಳೂರು : ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆಗಾಗಿ ಕೌನ್ಸಿಲಿಂಗ್ ದಿನಾಂಕ ನಿಗದಿ ಮಾಡಿತ್ತು. ಆದರೆ, ಕೌನ್ಸಿಲಿಂಗ್ ಆರಂಭವಾಗುವ ಕೊನೆ ಕ್ಷಣದಲ್ಲಿ ಕೆಲ ಶಿಕ್ಷಕರು ಕೆಎಟಿ ಮೊರೆ ಹೋಗಿದ್ದರು. ಈ ಕಾರಣದಿಂದಾಗಿ ವರ್ಗಾವಣೆಗೆ ತಡೆ ನೀಡಲಾಗಿತ್ತು.
ಶಿಕ್ಷಕರಿಗೆ ಗುಡ್ ನ್ಯೂಸ್.. ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಶೀಘ್ರದಲ್ಲೇ ದಿನಾಂಕ ಪ್ರಕಟ.. - ಶಿಕ್ಷಣ ಸಚಿವ ನಾಗೇಶ್
ವರ್ಗಾವಣೆಗಾಗಿ ಸುಮಾರು 72,000 ಶಿಕ್ಷಕರು ಅರ್ಜಿ ಸಲ್ಲಿಸಿ, ಕೌನ್ಸಿಲಿಂಗ್ಗಾಗಿ ಕಾಯುತ್ತಿದ್ದಾರೆ. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ..
ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಶೀಘ್ರದಲ್ಲೇ ದಿನಾಂಕ ಪ್ರಕಟ
ಇದೀಗ ತಡೆಯಾಜ್ಞೆ ಕುಲಾಸೆಯಾಗಿದೆ. ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಮುಂದಾಗಲಿದೆ. ಅಂದಾಹಾಗೇ, ಕಡ್ಡಾಯ ವರ್ಗಾವಣೆಯನ್ನ ಪ್ರಶ್ನಿಸಿ ಕೆಎಟಿ ಮೊರೆ ಹೋಗಿದ್ದರು, ಇದನ್ನ ಶಿಕ್ಷಣ ಇಲಾಖೆಯು ಪ್ರಶ್ನಿಸಿತ್ತು. ಕಡೆಗೆ ಶಿಕ್ಷಣ ಇಲಾಖೆ ಪರವಾಗಿ ತೀರ್ಪು ಬಂದಿದೆ.
ವರ್ಗಾವಣೆಗಾಗಿ ಸುಮಾರು 72,000 ಶಿಕ್ಷಕರು ಅರ್ಜಿ ಸಲ್ಲಿಸಿ, ಕೌನ್ಸಿಲಿಂಗ್ಗಾಗಿ ಕಾಯುತ್ತಿದ್ದಾರೆ. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.