ಕರ್ನಾಟಕ

karnataka

ETV Bharat / state

ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹ: ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ - ಬೆಂಗಳೂರು ಪ್ರತಿಭಟನೆ ಸುದ್ದಿ

ಮಲತಾಯಿ ಧೋರಣೆ ನಿಲ್ಲಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೋರಂನ ಸದಸ್ಯರು ಪ್ರತಿಭಟಿಸಿದರು.

Teachers and Management Forum Members  protest
ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೋರಂ ಸದಸ್ಯರಿಂದ ಪ್ರತಿಭಟನೆ

By

Published : Sep 5, 2020, 10:35 AM IST

ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಆರೋಗ್ಯ ವಿಮೆ ನೀಡುವಂತೆ ಹಾಗೂ ಮಲತಾಯಿ ಧೋರಣೆ ನಿಲ್ಲಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೋರಂನ ಸದಸ್ಯರು ಪ್ರತಿಭಟಿಸಿದರು.

ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೋರಂ ಸದಸ್ಯರಿಂದ ಪ್ರತಿಭಟನೆ

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸುಮಾರು 6 ತಿಂಗಳಿನಿಂದ ಶಿಕ್ಷಣ ಸಂಸ್ಥೆಗಳು ತತ್ತರಿಸಿ ಹೋಗಿವೆ. ವೇತನವಿಲ್ಲದ ಕಾರಣ, ಸುಮಾರು 4.50 ಲಕ್ಷ ಅನುದಾನ ರಹಿತ ಶಾಲಾ ಶಿಕ್ಷಕರು ಜೀವನ‌ ನಡೆಸಲು ಕಷ್ಟಕರ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮತ್ತು ಅತಿಥಿ ಉಪನ್ಯಾಸಕರಿಗೆ ಸವಲತ್ತು ನೀಡುವಂತೆ ಒತ್ತಾಯಿಸಿದರು.

ಈ ವೇಳೆ ಸಚಿವ ಸುರೇಶ್ ಕುಮಾರ್ ಪ್ರತಿಭಟನಾಕಾರರನ್ನ ಭೇಟಿ ಮಾಡಿ, ಅವರೊಂದಿಗೆ ಚರ್ಚಿಸಿ, ಕೂಡಲೇ ಶಿಕ್ಷಣ ಇಲಾಖೆ ತೆಗೆದುಕೊಳ್ಳಬಹುದಾದ ಕೆಲ ಕ್ರಮಗಳ ಕುರಿತು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details