ಕರ್ನಾಟಕ

karnataka

ETV Bharat / state

ಶಾಲೆಗಳನ್ನು ಪುನಃ ತೆರೆಯಲು ಅನುಕೂಲವಾಗುವಂತೆ ಶಿಕ್ಷಕರಿಗೆ ಲಸಿಕೆ ನೀಡಲಾಗುವುದು: ಸುಧಾಕರ್​ - ಕರ್ನಾಟಕ ಶಿಕ್ಷಣ ಇಲಾಖೆ

ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳನ್ನು ಶೀಘ್ರವಾಗಿ ಪುನಾರಂಭಿಸುವುದಕ್ಕಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Teachers to be vaccinated
ಸಚಿವ ಡಾ.ಕೆ.ಸುಧಾಕರ್

By

Published : Jul 22, 2021, 8:55 AM IST

ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೋವಿಡ್ ಲಸಿಕೆ ನೀಡಲಾಗುವುದು. ಈ ಮೂಲಕ ಮಕ್ಕಳಿಗೆ ಅಧ್ಯಾಪಕರಿಂದ ಸೋಂಕು ಬರದಂತೆ ತಡೆದು, ಶಾಲೆಗಳನ್ನು ಮತ್ತೆ ತೆರೆಯಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಶಾಲೆಗಳನ್ನು ಶೀಘ್ರವಾಗಿ ತೆರೆಯಲು ರಾಜ್ಯ ಸರ್ಕಾರ ಬಯಸಿದೆ ಎಂದು ಟ್ವೀಟ್‌ಗಳಲ್ಲಿ ಸುಧಾಕರ್ ಹೇಳಿದ್ದಾರೆ. ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳನ್ನು ಶೀಘ್ರವಾಗಿ ಪುನಾರಂಭಿಸುವುದಕ್ಕಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಸಚಿವ ಡಾ.ಕೆ.ಸುಧಾಕರ್ ಟ್ವೀಟ್​

ಆನ್‌ಲೈನ್ ತರಗತಿಗಳು ನಡೆಯುತ್ತಿದ್ದರೂ ಕೊರೊನಾ ಹೆದರಿಕೆಯ ದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ಮುಚ್ಚಲಾಯಿತು. ಕೊರೊನಾ ಮೂರನೇ ಅಲೆಯ ಹೊಡೆತ ಮತ್ತು ಮಕ್ಕಳು ಸೋಂಕಿಗೆ ಒಳಗಾಗುವ ಬಗ್ಗೆ ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸಿರುವಂತೆ, ವಯಸ್ಕರಿಗೆ ಲಸಿಕೆ ನೀಡುವುದರಿಂದ ಸರ್ಕಾರವು ಯುವಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುತ್ತದೆ. ಪ್ರಸ್ತುತ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಯಾವುದೇ ಲಸಿಕೆ ಇಲ್ಲ ಎಂದು ಹೇಳಿದ್ದಾರೆ.

ABOUT THE AUTHOR

...view details