ಕರ್ನಾಟಕ

karnataka

ETV Bharat / state

ಮಕ್ಕಳ ಸುರಕ್ಷತೆಗಾಗಿ ಆದ್ಯತೆಯ ಮೇರೆಗೆ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್ - ಕೋವಿಡ್ ಲಸಿಕೆ

ಶಾಲೆಯ ಸಿಬ್ಬಂದಿ ವರ್ಗವನ್ನು ವಿಶೇಷ ಗುಂಪಾಗಿ ಪರಿಗಣಿಸಿ ಅವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕೆಂದು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

sudhakar
sudhakar

By

Published : Jul 22, 2021, 8:58 PM IST

ಬೆಂಗಳೂರು:ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ಧತೆಯಾಗಿ ಶಾಲೆಗಳ ಎಲ್ಲಾ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್‌ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪರಿಣಿತರ ಅಭಿಪ್ರಾಯ, ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಸಿಬ್ಬಂದಿ ವರ್ಗವನ್ನು ವಿಶೇಷ ಗುಂಪಾಗಿ ಪರಿಗಣಿಸಿ ಅವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕೆಂದು ತೀರ್ಮಾನಿಸಲಾಗಿದೆ. ಮಕ್ಕಳ ಪೋಷಕರಿಗೆ, ಕುಟುಂಬದವರಿಗೆ ಲಸಿಕೆ ನೀಡಲಾಗಿದೆ. ಇನ್ನೂ ಕೆಲ ದಿನಗಳು ಕಳೆದರೆ ಲಸಿಕೆ ಪಡೆದವರ ಸಂಖ್ಯೆ 3 ಕೋಟಿಗೆ ತಲುಪಲಿದೆ. ಅನೇಕರಿಗೆ ಕೊರೊನಾ ಪಾಸಿಟಿವ್ ಬಂದು ಹೋಗಿ ಅವರಲ್ಲಿ ಆ್ಯಂಟಿಬಾಡಿ ಉತ್ಪಾದನೆಯಾಗಿರುವುದೂ ಇದೆ. ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕಾಲೇಜು ಆರಂಭಿಸಲು ತೀರ್ಮಾನಿಸಲಾಗುತ್ತಿದೆ. ಇದೇ ರೀತಿ ಹಂತಹಂತವಾಗಿ ನೋಡಿಕೊಂಡು ಈ ಬಗ್ಗೆ ತೀರ್ಮಾನಿಸಲಾಗುತ್ತದೆ. ಇಂತಹ ತೀರ್ಮಾನವನ್ನು ಬಹಳ ಎಚ್ಚರದಿಂದ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಪ್ರತಿ ದಿನ ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಶೇ.5ರಷ್ಟನ್ನು ಹೊಸ ವೈರಾಣು ಅಧ್ಯಯನಕ್ಕೆ ಒಳಪಡಿಸಿ ಪರೀಕ್ಷಿಸಲಾಗುತ್ತಿದೆ. ಈ ಮಾಹಿತಿಯನ್ನು ಐಸಿಎಂಆರ್ ಜೊತೆ ಹಂಚಿಕೊಳ್ಳಲಾಗುತ್ತಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details