ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳನ್ನು ತುರ್ತುಸೇವೆಗೆ ಬಳಸಿಕೊಳ್ಳಲಾಗಿತ್ತು. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರು, ವಿಶೇಷವಾಗಿ ಮುಖ್ಯ ಶಿಕ್ಷಕರ ಅಲಭ್ಯತೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರೆಸುವ ಯೋಜನೆಯಾದ ವಿದ್ಯಾಗಮ ಅನುಷ್ಠಾನ, ಮಧ್ಯಾಹ್ನದ ಉಪಹಾರ ಯೋಜನೆಯ ಅನುಷ್ಠಾನವು ಸಮರ್ಪಕವಾಗಿ ಆಗಬೇಕಿದೆ. ಶಾಲೆಗಳಲ್ಲಿ ಕನಿಷ್ಠ ಪಕ್ಷ ಮುಖ್ಯೋಪಾಧ್ಯಾಯರು ಲಭ್ಯವಿರಬೇಕಾದದ್ದು ಅವಶ್ಯಕವಾಗಿರುತ್ತದೆ.
ಶೈಕ್ಷಣಿಕ ಚಟುವಟಿಕೆಗಳಿಗೆ ಶಿಕ್ಷಕರ ಅಗತ್ಯತೆ: ಕೋವಿಡ್ ಕೆಲಸದಲ್ಲಿದ್ದ ಶಿಕ್ಷಕರು ಮುಕ್ತ
ರಾಜ್ಯದಲ್ಲಿ ಕೋವಿಡ್ ಕಾರಣದಿಂದ ಸಿಬ್ಬಂದಿ ಕೊರತೆ ಉಂಟಾಗಿದ್ದು ಶಿಕ್ಷಕರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತಿತ್ತು. ಇದು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಉಂಟು ಮಾಡಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರುಗಳನ್ನು ಕೋವಿಡ್ ಜವಾಬ್ದಾರಿಯಿಂದ ಮುಕ್ತಗೊಳಿಸುವಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯಕ್ತರಿಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
teachers working for covid
ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಕೋವಿಡ್ ಜವಾಬ್ದಾರಿಯಿಂದ ಮುಕ್ತಗೊಳಿಸುವಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯಕ್ತರಿಗೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.