ಬೆಂಗಳೂರು:ಅಂಬೇಡ್ಕರ್ ಅವರ ಎಷ್ಟೋ ಸಂದೇಶಗಳು ನನಗೆ ಆದರ್ಶವಾಗಿವೆ. ಅವರ ಆದರ್ಶಗಳನ್ನ ನನ್ನ ಜೀನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ - undefined
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ತಮ್ಮ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಿದ್ದಾರೆ.
![ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ](https://etvbharatimages.akamaized.net/etvbharat/prod-images/768-512-3371035-thumbnail-3x2-chai.jpg)
ತೇಜಸ್ವಿ ಸೂರ್ಯ
ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ
ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ತೇಜಸ್ವಿ ಸೂರ್ಯ ಪುಷ್ಪಾಪರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಇಡೀ ಭಾರತವೇ ಗೆದ್ದಿದೆ. ಹೀಗಾಗಿ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆ. ನಿನ್ನೆ ಕೂಡ ಇಲ್ಲಿಗೆ ಬಂದು ನಮಸ್ಕರಿಸಿ ಹೋಗಿದ್ದೆ. ಮೋದಿಯವರಿಗೆ ಜನ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಹಾಗೇ ನನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದರು.