ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಅವರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ ಸಲ್ಲಿಸಿದರು.
ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ - ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿ
ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಅವರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಈ ವೇಳೆ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಸೇರಿದಂತೆ ಇತರರು ಇದ್ದರು.
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ
ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ನವಂಬರ್ 1 ರಂದು ನಡೆದ ಸಮಾರಂಭಕ್ಕೆ ಅನಿವಾರ್ಯ ಕಾರಣಗಳಿಂದಾಗಿ ಗೈರಾಗಿದ್ದರು. ಈ ಹಿನ್ನೆಲೆ ಇವರಿಗೆ ಇಂದು ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ, ನಿರ್ದೇಶಕ ರಂಗಪ್ಪ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.