ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಟೀಚರ್ ಎಲಿಜಿಬಿಲಿಟಿ ಟೆಸ್ಟ್ (ಟಿಇಟಿ) ಪರೀಕ್ಷೆ ದಿನಾಂಕ ಪ್ರಕಟವಾಗಿದೆ.
ಬಹು ನಿರೀಕ್ಷಿತ ಟಿಇಟಿ ಪರೀಕ್ಷಾ ದಿನಾಂಕ ಪ್ರಕಟಿಸಿದ ಸುರೇಶ್ ಕುಮಾರ್ - tet exam
ಬಹು ನಿರೀಕ್ಷಿತ ಶಿಕ್ಷಕರ ನೇಮಕಾತಿ ಅರ್ಹತೆಯ ಟಿಇಟಿ ಪರೀಕ್ಷೆಗಳನ್ನು ಜುಲೈ 5ರಂದು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬಹು ನಿರೀಕ್ಷಿತ ಶಿಕ್ಷಕರ ನೇಮಕಾತಿ ಅರ್ಹತೆಯ ಟಿಇಟಿ ಪರೀಕ್ಷೆಗಳನ್ನು ಜುಲೈ 5ರಂದು ನಡೆಸಲಾಗುವುದು. ಅವಕಾಶ ವಂಚಿತ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.
ಏಪ್ರಿಲ್ನಲ್ಲಿ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಆದರೆ, ಕಾರಣಾಂತರಗಳಿಂದ ಅದು ಮುಂದೂಡಲ್ಪಟ್ಟಿತ್ತು. ಇನ್ನು ಒಂದೇ ದಿನ ಕೆ ಸೆಟ್, ಟಿಇಟಿ ಪರೀಕ್ಷೆಯನ್ನ ಮಾಡುವುದಾಗಿ ಹೇಳಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಕಾರಣದಿಂದ ಬೇರೆ ಬೇರೆ ದಿನದಲ್ಲಿ ನಡೆಸುವುದಾಗಿ ಸಚಿವರು ಭರವಸೆ ನೀಡಿದರು. ಇದೀಗ ಜುಲೈನಲ್ಲಿ ಪರೀಕ್ಷೆ ನಡೆಯಲಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.