ಬೆಂಗಳೂರು:ರಾಜ್ಯದಲ್ಲಿ ಐಸಿಯು ಬೆಡ್ ಗಳ ಕೊರತೆ ಹೆಚ್ಚಾಗುತ್ತಿದ್ದು, ಇವುಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಸರ್ಕಸ್ ನಡೆಸುತ್ತಿದೆ. ಈ ನಡುವೆ ಕೆಲ ಸಂಸ್ಥೆಗಳು ಸರ್ಕಾರದ ನೆರವಿಗೆ ಬರುತ್ತಿದ್ದು, ಅದರಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ ಕೂಡ ಒಂದಾಗಿದೆ.
ಕೋವಿಡ್-19 ಸೋಂಕಿತರ ಚಿಕಿತ್ಸೆಗೆ 86 ಐ.ಸಿ.ಯು ಬೆಡ್ಗಳನ್ನು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ ಒದಗಿಸಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಈ ಕುರಿತು ತಿಳಿಸಿದರು.