ಕರ್ನಾಟಕ

karnataka

ETV Bharat / state

ನನ್ನನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವ ನಿಮಗೆ ಧನ್ಯವಾದ: ಡಿಕೆ ಶಿವಕುಮಾರ್ - bengaluru vokkaliga protest

ನಾಳೆ ಒಕ್ಕಲಿಗ ಸಮುದಾಯದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ಪ್ರತಿಭಟನೆಯು ಶಾಂತಿಯುತವಾಗಿರಬೇಕು ಮತ್ತು ನಾಗರಿಕರಿಗೆ ಯಾವುದೇ ರೀತಿಯಲ್ಲೂ ಅನಾನುಕೂಲತೆಯನ್ನು ಉಂಟುಮಾಡಬೇಡಿ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಶಿವಕುಮಾರ್

By

Published : Sep 10, 2019, 8:29 PM IST

ಬೆಂಗಳೂರು:ನಾಳೆ ಬೆಂಗಳೂರಿನಲ್ಲಿ ನನ್ನನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ಆಯೋಜಿಸಿರುವ ನಾಯಕರು, ಬೆಂಬಲಿಗರು, ಹಿತೈಷಿಗಳು ಮತ್ತು ಸ್ನೇಹಿತರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾಳೆ ಡಿ.ಕೆ ಶಿವಕುಮಾರ್​ ಬಂಧನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ನಡೆಯುತ್ತಿರುವ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರತಿಭಟನೆಯು ಶಾಂತಿಯುತವಾಗಿರಬೇಕು ಮತ್ತು ನಾಗರಿಕರಿಗೆ ಯಾವುದೇ ಅನಾನುಕೂಲತೆಯನ್ನು ಉಂಟುಮಾಡಬೇಡಿ ಎಂದು ನಾನು ವಿನಮ್ರವಾಗಿ ವಿನಂತಿಸುತ್ತೇನೆ. ದಯವಿಟ್ಟು ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳಿ ಎಂದಿದ್ದಾರೆ.

ದ್ವೇಷದ ರಾಜಕಾರಣಕ್ಕೆ ಬಲಿ:

ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷದ ರಾಜಕಾರಣಕ್ಕೆ ಬಲಿಯಾಗಿದ್ದೇನೆ. ಇದನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ. ನಿಮ್ಮೆಲ್ಲರಿಂದ ನಾನು ಪಡೆಯುತ್ತಿರುವ ಬೆಂಬಲ ಮತ್ತು ಆಶೀರ್ವಾದ ಮತ್ತು ದೇವರು ಮತ್ತು ನಮ್ಮ ನ್ಯಾಯಾಂಗದ ಮೇಲಿನ ನನ್ನ ನಂಬಿಕೆಯಿಂದ, ನಾನು ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ವಿಜಯಶಾಲಿಯಾಗುತ್ತೇನೆ ಎಂಬ ಸಂಪೂರ್ಣ ನಂಬಿಕೆ ನನ್ನಲ್ಲಿದೆ ಎಂದು ಡಿಕೆಶಿ ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details