ಕರ್ನಾಟಕ

karnataka

ETV Bharat / state

ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನಾಳೆ ಪ್ರಮಾಣ ವಚನ

ನಾಳೆ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಪದಗ್ರಹಣ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10.30ಗೆ ರಾಜಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ..

Thawar Chand Gehlot
ಥಾವರ್ ಚಂದ್ ಗೆಹ್ಲೋಟ್

By

Published : Jul 10, 2021, 9:48 PM IST

ಬೆಂಗಳೂರು :ಥಾವರ್ ಚಂದ್ ಗೆಹ್ಲೋಟ್ ನಾಳೆ ರಾಜ್ಯದ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದು, ರಾಜಭವನದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಪದಗ್ರಹಣ ಮಾಡಲಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸಿರುವ ಥಾವರ್ ಚಂದ್ ಗೆಹ್ಲೋಟ್​​​ರನ್ನು ಕಂದಾಯ ಸಚಿವ ಆರ್.ಅಶೋಕ್ ಸ್ವಾಗತಿಸಿದರು. ನಾಳೆ ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಅವರು ಎನ್‌ಡಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಪುಟ ಸಚಿವರಾಗಿದ್ದರು. ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು. ಥಾವರ್ ಚಂದ್ ಗೆಹ್ಲೋಟ್​​​​ಗೆ ಕರ್ನಾಟಕದ ನಂಟು ಹೊಸತಲ್ಲ. ಪಕ್ಷ ಅವರಿಗೆ 2006 ಮತ್ತು 2014ರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಜವಾಬ್ದಾರಿ ನೀಡಿತ್ತು. ಇದೀಗ ಕರ್ನಾಟಕದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅವರು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ 1948ರ ಮೇ 18ರಂದು ದಲಿತ ಕುಟುಂಬದಲ್ಲಿ ಜನಿಸಿದ್ದರು. 73 ವರ್ಷದ ಗೆಹ್ಲೋಟ್ ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಬಿಎ ಪದವಿ ಪಡೆದಿದ್ದಾರೆ. ಬಿಜೆಪಿಯ ಸಕ್ರಿಯ ಸದಸ್ಯರಾಗಿದ್ದ ಅವರು, ಪಕ್ಷದಲ್ಲಿ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

  • 1977-1980ರವರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರಾಗಿದ್ದರು.
  • 1985ರಲ್ಲಿ ಬಿಜೆಪಿಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು.
  • 1980, 1990, 1993ರಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಚುನಾಯಿತರಾಗಿದ್ದರು.
  • 1986 ರಿಂದ 1987ರವರೆಗೆ ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷರಾಗಿದ್ದರು.
  • 1996 ರಿಂದ 2009ರವರೆಗೂ ಮಧ್ಯಪ್ರದೇಶದ ಶಾಜಾಪುರ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು.

2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಬಳಿಕ ಅವರು 2018ರಲ್ಲಿ ಮಧ್ಯಪ್ರದೇಶದಿಂದ ಮರು ಆಯ್ಕೆಯಾದರು. ಬಳಿಕ 2014ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು. ಪ್ರಧಾನಿ ಮೋದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಥಾವರ್ ಚಂದ್, ಪರಿಶಿಷ್ಟ ಜಾತಿಗೆ ಸೇರಿದ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

ABOUT THE AUTHOR

...view details