ಕರ್ನಾಟಕ

karnataka

By

Published : Jun 14, 2021, 3:16 PM IST

Updated : Jun 14, 2021, 3:30 PM IST

ETV Bharat / state

ನಾಳೆಯಿಂದ ಶೈಕ್ಷಣಿಕ‌ ವರ್ಷ ಆರಂಭ.. ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದ ಶಿಕ್ಷಣ ಇಲಾಖೆ

ನಾಳೆಯಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಶಿಕ್ಷಕರು ಅನ್ಯ ಕಾರಣ ನೀಡದೆ, ವೈದ್ಯರು, ಪೌರ ಕಾರ್ಮಿಕರ ಕೆಲಸದ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಂದೂಡವ ಪ್ರಶ್ನೆಯೇ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

The academic year begins tomorrow
ನಾಳೆಯಿಂದ ಶೈಕ್ಷಣಿಕ‌ ವರ್ಷ ಆರಂಭ

ಬೆಂಗಳೂರು: ನಾಳೆಯಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚಿಸಲಾಗಿದೆ. ಜುಲೈ 1 ರಿಂದ ಶೈಕ್ಷಣಿಕ ವರ್ಷ ಶಾಲಾ ತರಗತಿಗಳು ಆರಂಭವಾಗಲಿವೆ. ಹೀಗಾಗಿ ನಾಳೆಯಿಂದ ಮಕ್ಕಳ‌ ಶಾಲಾ ದಾಖಲಾತಿ ಪ್ರಾರಂಭಿಸಿ 31/08/2021 ರ ಒಳಗೆ ಮುಕ್ತಾಯಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಲಾಕ್​ಡೌನ್ ಜಾರಿಯಲ್ಲಿರುವ ಜಿಲ್ಲೆಯವರು ಪಾಸ್​ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ. ಶಿಕ್ಷಕರು ಕೂಡ ಅನ್ಯ ಕಾರಣ ನೀಡದೆ, ವೈದ್ಯರು, ಪೌರ ಕಾರ್ಮಿಕರ ಕೆಲಸದ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಂದೂಡವ ಪ್ರಶ್ನೆಯೇ ಇಲ್ಲ. ಕೋವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದಿದ್ದರೆ, ಪರ್ಯಾಯವಾಗಿ ಆನ್ ಲೈನ್, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ:ಪೋಷಕರನ್ನು ಕಳೆದುಕೊಳ್ಳುವ ಮಕ್ಕಳ ಹೆಸರಿಗೆ ಪರಿಹಾರದ ಹಣ ಠೇವಣಿ : ಡಿಸಿಎಂ ಕಾರಜೋಳ

ಈ ವಿಚಾರವಾಗಿ ಖಾಸಗಿ ಶಾಲಾ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಮಾತನಾಡಿ, ಖಾಸಗಿ ಶಾಲಾ ಒಕ್ಕೂಟಗಳು ಕೆಲವು ನಿರ್ಧಾರಗಳನ್ನ ತೆಗೆದುಕೊಂಡಿದ್ದಾರೆ‌‌. ಪೋಷಕರು ಶುಲ್ಕ ಕಟ್ಟಲು ಸಾಧ್ಯವಾಗದಿದ್ದರೆ ಆನ್​ಲೈನ್ ಕ್ಲಾಸ್​ ನಿಲ್ಲಿಸಲ್ಲ. ಕೋವಿಡ್​ ಬಿಕ್ಕಟ್ಟು ಇರೋದರಿಂದ ಎಲ್ಲರೂ ನಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಫೀಸ್​​ ಕಟ್ಟಲು ಆಗದಿರಬಹುದು. ಹಾಗಾಗಿ ಪೋಷಕರ ಮೇಲೆ ಒತ್ತಡ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.

Last Updated : Jun 14, 2021, 3:30 PM IST

ABOUT THE AUTHOR

...view details