ಬೆಂಗಳೂರು :ವಾಯು ವಿಹಾರಕ್ಕೆಂದು ತೆರಳಿದ್ದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿರುವ ದುಷ್ಕರ್ಮಿಗಳು ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.
ಸಿದ್ದಾಪುರ ನಿವಾಸಿ ಸುಶೀಲಮ್ಮ ಎಂಬುವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ವರ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈಟ್‌ಫೀಲ್ಡ್‌ನ ಸಿದ್ದಾಪುರದಲ್ಲಿ ನೆಲೆಸಿರುವ ಸುಶೀಲಮ್ಮ ಗೃಹಿಣಿಯಾಗಿದ್ದು, ಪತಿ ಮುನಿನಾರಾಯಣಪ್ಪ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಸ್‌ಪಿ ಕಚೇರಿಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಲ್ಲಿ ಊಟ ಮುಗಿಸಿ ವಾಯು ವಿಹಾರಕ್ಕೆ ತೆರಳಿದ್ದರು.