ಬೆಂಗಳೂರು:ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾದಕ ಪದಾರ್ಥ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳ ತಂಡ ಬಂಧಿಸಿದೆ. ದೊಮ್ಮಲೂರಿನ ನಿವಾಸಿಯಾಗಿರುವ ಭರತ್ ಬಂಧಿತ ಆರೋಪಿ. ಈತನಿಂದ ಒಟ್ಟು 8 ಲಕ್ಷ 40 ಸಾವಿರ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
2024ರ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರ ತಂಡ ಡ್ರಗ್ಸ್ ಪೆಡ್ಲರ್‌ಗಳ ಮೇಲೆ ವಿಶೇಷ ಕಾರ್ಯಾಚರಣೆ ಕೈಗೊಂಡಿತ್ತು. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ನಿಷೇಧಿತ ವಿವಿಧ ಬಗೆಯ ಮಾದಕ ಮಾತ್ರೆಗಳು, 1.54 ಕೆಜಿ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.