ಬೆಂಗಳೂರು:ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆಸಿರುವ ಕಾಂಗ್ರೆಸ್ ನಾಯಕರಿಗೆ ಒಂದಿಷ್ಟು ಸಫಲತೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮತ್ತೆ ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ಆಗಮನ ಆಗಲಿದೆ.
ಮೈತ್ರಿ ಸರ್ಕಾರ ಉಳಿಯುವ ನಿರೀಕ್ಷೆ; ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ದಂಡು - ಬೆಂಗಳೂರು
ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಶಾಸಕರನ್ನು ಮನವೊಲಿಸಿ ವಾಪಾಸ್ ದೆಹಲಿಯತ್ತ ಮುಖ ಮಾಡಿದ್ದ ಕೈ ನಾಯಕರು ಇದೀಗ ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ. ಎಐಸಿಸಿ ಪ್ರಧಾನಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹಾಗೂ ಮಾಜಿ ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಇಂದು ಮಧ್ಯರಾತ್ರಿ ಬೆಂಗಳೂರಿನ ಕುಮಾರ ಕೃಪ ಅತಿಥಿಗೃಹಕ್ಕೆ ಆಗಮಿಸುತ್ತಿದ್ದಾರೆ.

ಪ್ರಧಾನಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್
ರಾಜ್ಯ ರಾಜಕಾರಣದಲ್ಲಿ ಮತ್ತೊಂದು ತಿರುವಿನೆಡೆ ಸಾಗುತ್ತಿದ್ದು, ಸಂತಸಗೊಂಡಿರುವ ಕಾಂಗ್ರೆಸ್ ಹೈಕಮಾಂಡ್ ತಮ್ಮ ಇಬ್ಬರು ನಾಯಕರನ್ನು ಇಂದು ರಾತ್ರಿ ರಾಜ್ಯಕ್ಕೆ ಕಳುಹಿಸಿಕೊಡಲಿದೆ. ನಾಲ್ಕು ದಿನದ ಹಿಂದೆ ಆಗಮಿಸಿ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಯತ್ನ ನಡೆಸಿ ವಾಪಸ್ ತೆರಳಿದ್ದ ಎಐಸಿಸಿ ಪ್ರಧಾನಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹಾಗೂ ಮಾಜಿ ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಇಂದು ಮಧ್ಯರಾತ್ರಿ ನಗರಕ್ಕೆ ಆಗಮಿಸುತ್ತಿದ್ದಾರೆ.
ಬೆಂಗಳೂರಿನ ಕುಮಾರ ಕೃಪ ಅತಿಥಿಗೃಹಕ್ಕೆ ಆಗಮಿಸುವ ನಾಯಕರು ಭಾನುವಾರ ಪಕ್ಷದ ನಾಯಕರೊಂದಿಗೆ ಸರಣಿ ಸಭೆ ನಡೆಸಲಿದ್ದಾರೆ.
TAGGED:
ಬೆಂಗಳೂರು