ಬೆಂಗಳೂರು:ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡದಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯವನ್ನು ಸಿಎಂ ಬಿಎಸ್ವೈ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಕೃಷ್ಣಾ ನದಿ ನೀರಿನ ಪ್ರವಾಹದಿಂದ ಸಮಸ್ಯೆಗೆ ಸಿಲುಕಿವೆ. ಪ್ರವಾಹ ಸ್ಥಿತಿಗೆ ಕೊಯ್ನಾ ಜಲಾಶಯದಿಂದ ಬಿಡುಗಡೆಯಾಗುತ್ತಿರುವ ಭಾರೀ ಪ್ರಮಾಣದ ನೆರೆ ನೀರು ಕಾರಣ. ಇದರಿಂದ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಕೊಯ್ನಾ ಜಲಾಶಯದ ನೀರಿನ ಬಿಡುಗಡೆಯನ್ನು ನಿಯಂತ್ರಿಸುವಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಂದ್ರ ಸರ್ಕಾರದ ಮೂಲಕ ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.