ಬೆಂಗಳೂರು:ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಒಂಟಿ ಮಹಿಳೆಯರನ್ನು ಗುರಿಯಾಗಿಸಿ ಮೊಬೈಲ್, ಸರಗಳ್ಳತನ: ಇಬ್ಬರ ಬಂಧನ - two chain robbers arrested
ನಗರದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಸರಗಳ್ಳತನ ಮಾಡುತ್ತಿದ್ದರು. ನಿರ್ಜನ ಪ್ರದೇಶದಲ್ಲಿ ಸುತ್ತಾಡುವ ಪುರುಷರನ್ನು ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗುತ್ತಿದ್ದರು.
ಕೂಡ್ಲೂ ಗ್ರಾಮದ ಪ್ರದೀಪ್ ಹಾಗೂ ನಾಗರಾಜ್ ಬಂಧಿತ ಆರೋಪಿಗಳು. ಇವರಿಂದ ಸುಮಾರು 5.50 ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪನಿಯ 10 ಮೊಬೈಲ್, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ನಿರ್ಜನ ಪ್ರದೇಶದಲ್ಲಿ ಸುತ್ತಾಡುವ ಪುರುಷರನ್ನು ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗುತ್ತಿದ್ದರು. ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರ ಬಂಧನದಿಂದ ಬಂಡೆಪಾಳ್ಯ ಹಾಗೂ ಹುಳಿಮಾವು ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.