ಕರ್ನಾಟಕ

karnataka

ETV Bharat / state

ಸಚಿವ ಸ್ಥಾನ ಸಿಗದ ಶಾಸಕರಿಂದ ಸಮಾರಂಭಕ್ಕೆ ಗೈರು...ಅಸಮಾಧಾನ

ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದ ಸಂಪುಟ ವಿಸ್ತರಣೆ ನಡೆಯುತ್ತಿದ್ದಂತೆ ಸಚಿವ ಸ್ಥಾನ ಸಿಗದ ಆಕಾಂಕ್ಷಿಗಳು ಅಸಮಾಧಾನಗೊಂಡು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಆಕಾಂಕ್ಷಿಗಳು

By

Published : Aug 20, 2019, 1:38 PM IST

ಬೆಂಗಳೂರು: ಸಿಎಂ ಯಡಿಯೂರಪ್ಪ ಸರಕಾರದ ಸಂಪುಟ ವಿಸ್ತರಣೆ ನಡೆಯುತ್ತಿದ್ದಂತೆ ಸಚಿವ ಸ್ಥಾನ ಸಿಗದ ಆಕಾಂಕ್ಷಿಗಳು ಅಸಮಾಧಾನಗೊಂಡು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಉಮೇಶ್ ಕತ್ತಿ, ಎ. ರಾಮದಾಸ್, ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಬಸನಗೌಡ ಪಾಟೀಲ್​​ ಯತ್ನಾಳ್, ಎಂ ಚಂದ್ರಪ್ಪ, ವೀರಣ್ಣ ಚರಂತಿಮಠ, ಹೆಚ್ ಹಾಲಪ್ಪ, ಕುಮಾರ್ ಬಂಗಾರಪ್ಪ, ಎಎಸ್ ಪಾಟೀಲ್​​ ನಡಹಳ್ಳಿ, ಅಭಯ ಪಾಟೀಲ್, ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸಿಎಂ ಉದಾಸಿ ಮಂತ್ರಿಗಿರಿ ಲಭಿಸದಿದ್ದಕ್ಕೆ ಅಸಮಾಧಾನ ಗೊಂಡಿದ್ದಾರೆ.

ದೇವದುರ್ಗ ಶಾಸಕ ಶಿವನಗೌಡ ನಾಯಕ, ಸುರಪುರ ಶಾಸಕ ರಾಜೂಗೌಡ, ಎಸ್ ಎ ರವೀಂದ್ರನಾಥ್, ಅರವಿಂದ ಲಿಂಬಾವಳಿ, ರವಿ ಸುಬ್ರಮಣ್ಯ, ಸತೀಶ್ ರೆಡ್ಡಿ ಸಹ ಸಚಿವಸ್ಥಾನದ ಆಕಾಂಕ್ಷಿಗಳಾಗಿದ್ದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಹೆಚ್ಚಿನ ಜನರಿಗೆ ಅವಕಾಶ ಸಿಕ್ಕಿಲ್ಲ ಸುಮಾರು 65ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದರು. ಅವರಲ್ಲಿ 17 ಜನರಿಗೆ ಮಾತ್ರ ಸಚಿವ ಸ್ಥಾನದ ಅದೃಷ್ಟ ಒಲಿದಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಸುಮಾರು 16 ಕ್ಕೂ ಹೆಚ್ಚು ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ತಮ್ಮ ನಾಯಕರ ಬಳಿ ಬೇಸರವನ್ನು ವ್ಯಕ್ತಪಡಿಸತೊಡಗಿದ್ದು, ಮುಖಂಡರು ಅತೃಪ್ತರನ್ನು ಸಮಾಧಾನ ಪಡಿಸುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನಂತರದ ಬಿಜೆಪಿಯಲ್ಲಿನ ಶಾಸಕರ ಅಸಮಾಧಾನದ ಲಾಭ ಹೇಗೆ ಪಡೆದುಕೊಳ್ಳಲು ಸಾಧ್ಯ ಎನ್ನುವ ಬಗ್ಗೆ ಪ್ರತಿ ಪಕ್ಷಗಳೂ ಚಿಂತನೆ ನಡೆಸತೊಡಗಿವೆ.

ABOUT THE AUTHOR

...view details