ಬೆಂಗಳೂರು: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಮಂಗಲ ಬಳಿಯಿರುವ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಓರ್ವನ ಬಂಧನ - ವೇಶ್ಯಾವಾಟಿಕೆ ಅಡ್ಡಾದ ಮೇಲೆ ಸಿಸಿಬಿ ಪೊಲೀಸರು ದಾಳಿ
ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಮಂಗಲ ಬಳಿಯಿರುವ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ಅಡ್ಡಾದ ಮೇಲೆ ಸಿಸಿಬಿ ದಾಳಿ
ಸೂರ್ಯ ಬಂಧಿತ ಆರೋಪಿ. ಈತನ ಜೊತೆಯಿದ್ದ ಅಬ್ದುಲ್ ಮುಕಿದ್, ಗುರುರಾಜ್, ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ಹೊರದೇಶ ಹಾಗೂ ಹೊರ ರಾಜ್ಯದ ಅಮಾಯಕ ಹುಡುಗಿಯರನ್ನ ಉದ್ಯೋಗ ಕೊಡಿಸುವ ನೆಪದಲ್ಲಿ ಕರೆ ತಂದು ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲ ಬಳಿಯಿರುವ ಈ ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆಗೆ ಬಿಡುತ್ತಿದ್ದರು ಎನ್ನಲಾಗ್ತಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ.
ಬಂಧಿತನಿಂದ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.