ಬೆಂಗಳೂರು: ಸಿ. ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಲಾಗಿದೆ. ವಿಧಾನಸಭೆಯಿಂದ ಪರಿಷತ್ಗೆ ಆಯ್ಕೆ ಮಾಡಲು ಆಗಸ್ಟ್ 11ಕ್ಕೆ ಉಪಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದೆ.
ಆಗಸ್ಟ್ 1 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 4ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.