ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನ ಕೆಣಕುತ್ತಿದೆ: ಸಿದ್ದರಾಮಯ್ಯ ಆಕ್ರೋಶ

ಕೆಂದ್ರ ಸರ್ಕಾರದ ನಡೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಕಿಡಿಕಾರಿದ್ದು, ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​​

By

Published : Sep 13, 2019, 10:48 PM IST

ಬೆಂಗಳೂರು: ಕನ್ನಡ ನಾಡು-ನುಡಿಯ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

ರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡದಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕನ್ನಡಿಗರು ಇದನ್ನು ಸಹಿಸಲಾರರು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆ ಪರಿಹಾರದಲ್ಲಿ‌ ನಿರ್ಲಕ್ಷ್ಯ ಈ ಎಲ್ಲಾ ವಿಚಾರವಾಗಿ ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details