ಬೆಂಗಳೂರು : ಕರ್ನಾಟಕ ಸಂಘಟಿತ ಅಪರಾಧಗಳ ತಡೆ ಕಾಯಿದೆ (ಕೋಕಾ) ಪ್ರಕರಣದ ಅಪರಾಧಿಗಳ ಕುರಿತು ತನಿಖಾಧಿಕಾರಿಗಳು ಅನುಸರಿಸುವುದಕ್ಕಾಗಿ ಹೈಕೋರ್ಟ್ ಹಲವು ಮಾರ್ಗಸೂಚಿಗಳನ್ನು ನೀಡಿದೆ. ಅಲ್ಲದೆ, ಇವುಗಳನ್ನು ಮುಂದಿನ ನಾಲ್ಕು ವಾರಗಳಲ್ಲಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬನ್ನಂಜೆ ರಾಜನ ವಿರುದ್ಧ ದಾಖಲಾಗಿರುವ ಕೋಕಾ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಇತರೆ ಕ್ರಿಮಿನಲ್ ಅಪರಾಧ ಪ್ರಕರಣಗಳ ವಿಚಾರಣೆಗೆ ತಡೆ ನೀಡಬೇಕು ಎಂದು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಬೆಳಗಾವಿಯ ಕೋಕಾ ವಿಶೇಷ ನ್ಯಾಯಾಲಯದ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿ ರದ್ದುಪಡಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿರಂದರಾಜು ಅವರಿದ್ದ ಪೀಠ, ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಯಾವುದೇ ಆರೋಪಿ ನ್ಯಾಯಯುತ ಮತ್ತು ತ್ವರಿತ ವಿಚಾರಣೆ ಬಯಸುವುದು ಮೂಲಭೂತ ಹಕ್ಕು. ಇದು ಅರ್ಜಿದಾರರ ಎಲ್ಲ ಪ್ರಕರಣಗಳಿಗೂ ಅನ್ವಯವಾಗಲಿದೆ. ಹೀಗಾಗಿ ಒಂದು ಪ್ರಕರಣ ಬಾಕಿ ಇದೆ ಎಂದ ಮಾತ್ರಕ್ಕೆ ಇತರೆ ಪ್ರಕರಣಗಳ ವಿಚಾರಣೆಗೆ ತಡೆ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.
ಅಲ್ಲದೇ, ಕೋಕಾ ಕಾಯಿದೆಯಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಹಲವು ಮಾರ್ಗ ಸೂಚಿಗಳನ್ನು ಹೊರಡಿಸಿದ್ದು, ಮುಂದಿನ ನಾಲ್ಕು ವಾರಗಳಲ್ಲಿ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಾರ್ಗಸೂಚಿಗಳು ಹೀಗಿವೆ..
1. ಕೋಕಾ ಪ್ರಕರಣ ಎದುರಿಸುತ್ತಿರುವ ಆರೋಪಿಯ ವಿರುದ್ಧದ ಪ್ರಕರಣಗಳ ವಿಚಾರಣೆ ಪ್ರಾರಂಭವಾಗಿದಿಯೇ? ಎಷ್ಟು ಸಾಕ್ಷಿಗಳನ್ನು ಪರೀಕ್ಷಿಸಲಾಗಿದೆ ಮತ್ತು ಆರೋಪಿಗಳ ಬಂಧನದ ವಿವರಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಿರಬೇಕು.