ಕರ್ನಾಟಕ

karnataka

ETV Bharat / state

ನಾಡದೇವಿಯ ಪ್ರಮಾಣಿತ, ಅಧಿಕೃತ ಚಿತ್ರ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಮಿತಿ ಶಿಫಾರಸು

ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿಯು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ.

the-committee-recommends-implemention-of-standard-official-image-of-nadadevi
ನಾಡದೇವಿಯ ಪ್ರಮಾಣಿತ, ಅಧಿಕೃತ ಚಿತ್ರ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಮಿತಿ ಶಿಫಾರಸು

By

Published : Nov 21, 2022, 4:19 PM IST

ಬೆಂಗಳೂರು: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿಯು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ನೀಡಿದೆ.

ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ. ಕರ್ನಾಟಕ ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಲ್ಲಿ ಚಿತ್ರಿಸಿ ಉಪಯೋಗಿಸುತ್ತಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಡದೇವತೆಯ ಪರಿಪೂರ್ಣವಾದ ಚಿತ್ರವನ್ನು ಅಧಿಕೃತಗೊಳಿಸುವ ಅವಶ್ಯಕತೆ ಇರುತ್ತದೆ ಎಂದು ಸಮಿತಿ ತಿಳಿಸಿದೆ.

ನಾಡದೇವಿಯ ಪ್ರಮಾಣಿತ, ಅಧಿಕೃತ ಚಿತ್ರ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಮಿತಿ ಶಿಫಾರಸು

ನಾಡದೇವತೆಯ ಚಿತ್ರವನ್ನು ಪ್ರಮಾಣಿತಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಉಪಯೋಗಿಸುವಂತೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಗೋಡೆಗಳ ಮೇಲೆ ಅಳವಡಿಸುವಂತಾದಲ್ಲಿ, ಕರ್ನಾಟಕ ಸಾಂಸ್ಕೃತಿಕ ಹಿರಿಮೆಗೆ ಒಳ್ಳೆಯ ಕೊಡುಗೆ ನೀಡಿದಂತಾಗುತ್ತದೆ. ಆದ್ದರಿಂದ ಕಲಾವಿದರ ಸಮಿತಿಯನ್ನು ರಚಿಸಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸು ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೂಚಿಸಿದ್ದರು.

ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದಲ್ಲಿ ಕಲಾವಿದರ ಸಮಿತಿಯನ್ನು ರಚಿಸಲಾಗಿತ್ತು.

ಇದನ್ನೂ ಓದಿ :ಸಿದ್ದಾಪುರದಲ್ಲಿ ನೆಲನಿಂತ ಭುವನೇಶ್ವರಿಗೆ ನಿತ್ಯ ಪೂಜೆ; ಕನ್ನಡವೇ ಇಲ್ಲಿ ಉಸಿರು

ABOUT THE AUTHOR

...view details