ಬೆಂಗಳೂರು:ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಳವಾಗಿರುವುದನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಹತ್ಯೆ ಮತ್ತು ಆಕೆಯ ಕುಟುಂಬದವರ ಹತ್ಯೆಯಲ್ಲಿ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಮೊದಲ ಆರೋಪಿಯಾಗಬೇಕು, ಒಬ್ಬ ಗೂಂಡಾ ಮುಖ್ಯಮಂತ್ರಿ ಉತ್ತರ ಪ್ರದೇಶವನ್ನು ಆಳುತ್ತಿದ್ದು, ತನ್ನ ಸಹೋದ್ಯೋಗಿಯ ರಕ್ಷಣೆಗೆ ಈ ಎಲ್ಲಾ ಹತ್ಯೆಗಳು ನಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿದೆ.