ಕರ್ನಾಟಕ

karnataka

ETV Bharat / state

ಚುನಾವಣೆಗೆ ಸಿದ್ಧತೆ: ಕಾಂಗ್ರೆಸ್​ ಹೈಕಮಾಂಡ್​​ನಿಂದ ರಾಜಕೀಯ ವ್ಯವಹಾರಗಳ ಸಮಿತಿ ರಚನೆ - political affairs committee of congress karnataka

ಕರ್ನಾಟಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಮಿತಿ ರಚಿಸಿರುವ ಹಿನ್ನೆಲೆ ರಾಜ್ಯದ ನಾಯಕರಿಗೆ ಹೆಚ್ಚಿನ ಸ್ಥಾನ ಕಲ್ಪಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಜೊತೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುವ ಐವರು ಕಾರ್ಯದರ್ಶಿಗಳನ್ನು ಹೈಕಮಾಂಡ್ ನೇಮಕ ಮಾಡಿದೆ.

the-constituition-of-political-affairs-committee-of-congress
ಕಾಂಗ್ರೆಸ್ ಹೈಕಮಾಂಡ್ ನಿಂದ ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚನೆ

By

Published : Jul 10, 2022, 8:04 PM IST

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ವರ್ಷಕ್ಕೆ ಮುನ್ನವೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದು, 32 ಸದಸ್ಯರ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಲಾಗಿದೆ.

ಕರ್ನಾಟಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಮಿತಿ ರಚಿಸಿರುವ ಹಿನ್ನೆಲೆ ರಾಜ್ಯದ ನಾಯಕರಿಗೆ ಹೆಚ್ಚಿನ ಸ್ಥಾನ ಕಲ್ಪಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಜೊತೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುವ ಐವರು ಕಾರ್ಯದರ್ಶಿಗಳನ್ನು ಹೈಕಮಾಂಡ್ ನೇಮಕ ಮಾಡಿದೆ.

ಕರ್ನಾಟಕದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮಿತಿ ರಚನೆ :ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ, ಮಾರ್ಗರೇಟ್‌ ಆಳ್ವಾ, ಮಾಜಿ ಸಚಿವರಾದ ಹೆಚ್‌.ಕೆ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ದಿನೇಶ್‌ ಗುಂಡೂರಾವ್‌, ಕೆ.ಜೆ.ಜಾರ್ಜ್‌, ಕೃಷ್ಣ ಬೈರೇಗೌಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಈಶ್ವರ್‌ ಖಂಡ್ರೆ, ಸಲೀಂ ಅಹಮದ್‌, ಸತೀಶ್‌ ಜಾರಕಿಹೊಳಿ, ಧ್ರುವನಾರಾಯಣ, ಸಂಸದ ಡಿ.ಕೆ.ಸುರೇಶ್‌, ಶಾಸಕ ಯು.ಟಿ.ಖಾದರ್‌, ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಸುನಿಲ್‌ ಕಾನುಗೋಳು, ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಎನ್‌.ಎಸ್‌.ಬೋಸರಾಜು, ಸಂದೀಪ್‌ ಈ ಸಮಿತಿಯ ಸದಸ್ಯರಾಗಿದ್ದಾರೆ.

ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚನೆ

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಹೆಚ್‌.ಆಂಜನೇಯ, ರಮಾನಾಥ್‌ ರೈ, ವಿನಯ್‌ಕುಮಾರ್‌ ಸೊರಕೆ, ರಾಣಿ ಸತೀಶ್‌, ಉಮಾಶ್ರೀ , ಲಕ್ಷ್ಮಿ ಹೆಬ್ಟಾಳ್ಕರ್‌, ಡಾ.ಅಂಜಲಿ ನಿಂಬಾಳ್ಕರ್‌ ಅವರನ್ನು ನೇಮಿಸಲಾಗಿದೆ.

ರಾಜ್ಯ ಉಸ್ತುವಾರಿಗಳಾಗಿ ಎಐಸಿಸಿ ಕಾರ್ಯದರ್ಶಿಗಳಾದ ಡಿ.ಶ್ರೀಧರ್‌ ಬಾಬು, ಪಿ.ಸಿ.ವಿಷ್ಣುನಂದನ್‌, ಎಂ.ಜಾನ್‌, ಮಯೂರ ಎಸ್‌.ಜಯಕುಮಾರ್‌, ಅಭಿಷೇಕ್‌ ದತ್‌ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಶಾಸಕ ಪ್ರಿಯಾಂಕ್ ಖರ್ಗೆ, ಸಹ ಅಧ್ಯಕ್ಷರಾಗಿ ಮನ್ಸೂರ್ ಅಲಿ ಖಾನ್ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚನೆ

ಸೋನಿಯಾ ಗಾಂಧಿಯವರು ಐವರು ಎಐಸಿಸಿ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದು, ಇವರು ಪ್ರಧಾನ ಕಾರ್ಯದರ್ಶಿಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡಲು ಸೂಚಿಸಲಾಗಿದೆ. ಡಿ ಶ್ರೀಧರ್ ಬಾಬು, ಪಿ ಸಿ ಸಿ ವಿಷ್ಣುನಾದ್, ರೋಜಿ ಎಂ ಜಾನ್, ಮಯೂರ ಎಸ್ ಜಯಕುಮಾರ್ ಮತ್ತು ಅಭಿಷೇಕ್ ದತ್ತ ಹೊಸದಾಗಿ ನೇಮಕಗೊಂಡವರಾಗಿದ್ದಾರೆ. ಇವರು ಸಹ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ. ಕುಲ್ದೀಪ್ ಸಿಂಗ್ ಶರ್ಮ ಮತ್ತು ರಮಿಂದರ್ ಸಿಂಗ್ ಅವ್ಲ ಅವರನ್ನು ಈಗಿರುವ ಎಐಸಿಸಿ ಕಾರ್ಯದರ್ಶಿಗಳ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.

ಓದಿ :ದೇವರು ಮತ್ತು ಜನಾಶೀರ್ವಾದ ಇರುವವರೆಗೂ ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ ರೇವಣ್ಣ

ABOUT THE AUTHOR

...view details