ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆ ತೀರ್ಮಾನ ಸ್ವಾಗತಾರ್ಹ : ಡಿ.ಕೆ ಶಿವಕುಮಾರ್ - ಸರ್ವಪಕ್ಷಗಳ ಸಭೆ ಸ್ವಾಗತಿಸಿದ ಡಿಕೆಶಿವಕುಮಾರ್

ಕೊರೊನಾ ನಿರ್ವಹಣೆ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿರುವುದು ಸ್ವಾಗತಾರ್ಹ ಎಂದು ಡಿಕೆಶಿ ಹೇಳಿದರು.

all-party meeting welcomed by dkshivkumar
ಡಿ.ಕೆ ಶಿವಕುಮಾರ್

By

Published : Apr 4, 2020, 10:22 PM IST

ಬೆಂಗಳೂರು: ಕೊರೊನಾ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.

ನಾನು ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷ ಸಭೆ ಕರೆಯಬೇಕು. ದೇಶ ಎದುರಿಸುತ್ತಿರುವ ಈ ಸಂಕಷ್ಟ ಪರಿಸ್ಥಿತಿ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಬಂದಿದೆ ಎಂದರು.

ಮಾರ್ಚ್ 26 ರಂದು ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹಾಗೂ ಮಾರ್ಚ್ 27 ರಂದು ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ನಾನು ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸಿದ ಜಂಟಿ ಮಾಧ್ಯಮಗೋಷ್ಠಿಯಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಆಗ್ರಹಿಸಿದ್ದೇವೆ. ನಂತರ ವಿವಿಧ ಮಾಧ್ಯಮಗಳಿಗೆ ನೀಡಿದ ಸಂದರ್ಶನ ಹಾಗೂ ಹೇಳಿಕೆಗಳಲ್ಲೂ ಈ ಬಗ್ಗೆ ಒತ್ತಾಯಿಸಲಾಗಿತ್ತು. ಕೊನೆಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿರುವುದು ಶ್ಲಾಘನೀಯ ಎಂದು ಡಿಕೆಶಿ ತಿಳಿಸಿದರು.

ವಿಷನ್ ಕರ್ನಾಟಕ (Vision Karnataka) ಸಮಿತಿ ರಚನೆ :

ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ದೇಶದಲ್ಲಿ ಹೇರಲಾಗಿರುವ ಲಾಕ್​​ಡೌನ್ ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪುರೇಷೆಗಳನ್ನು ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ 'ವಿಷನ್ ಕರ್ನಾಟಕ' ಸಮಿತಿ ರಚಿಸಿದ್ದಾರೆ.

ಕೆಪಿಸಿಸಿ ವತಿಯಿಂದ ರಚಿಸಲಾಗಿರುವ ಈ ಸಮಿತಿಗೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು ಸಂಚಾಲಕರಾಗಿದ್ದಾರೆ. ಸದ್ಯ ದೇಶದಲ್ಲಿನ ಲಾಕ್ ಡೌನ್ ನಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಪ್ರಮಾಣದಲ್ಲಿ ಆರ್ಥಿಕ ಹೊಡೆತ ಬಿದ್ದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇದು ತಂದೊಡ್ಡಬಹುದಾದ ಪ್ರತಿಕೂಲ ಪರಿಣಾಮಗಳನ್ನು ಬಗೆಹರಿಸುವ ಬಗ್ಗೆ ಸಲಹೆಗಳನ್ನು ನೀಡಲು ಈ ಸಮಿತಿಯನ್ನು ರಚಿಸಲಾಗಿದೆ ಎಂದು ಡಿಕೆಶಿ ತಿಳಿಸಿದರು.

For All Latest Updates

ABOUT THE AUTHOR

...view details