ಕರ್ನಾಟಕ

karnataka

ETV Bharat / state

ಡಿಕೆಶಿ ಹೆಸರಲ್ಲಿ ಇನ್ನೂ ಅಪಾರ ಪ್ರಮಾಣದ ಬೇನಾಮಿ ಆಸ್ತಿ: ಇಡಿ ಶಂಕೆ - ಡಿಕೆಶಿ ಹೆಸರಲ್ಲಿ ಇನ್ನೂ ಅಪಾರ ಪ್ರಮಾಣದ ಬೇನಾಮಿ ಆಸ್ತಿ

ಡಿಕೆ ಶಿವಕುಮಾರ್ ಬಳಿ 800 ಕೋಟಿಗೂ ಹೆಚ್ಚಿನ ಮೌಲ್ಯದ ಆಸ್ತಿ ಇದೆ. ಅವರ ಪುತ್ರಿ ಐಶ್ವರ್ಯ ಹೆಸರಲ್ಲಿಯೇ 108 ಕೋಟಿ ರೂ ಬೆಲೆಬಾಳುವ ಆಸ್ತಿ ಇದೆ. ಈ ಆಸ್ತಿ ಸಂಪಾದನೆಗೆ ಆದಾಯದ ಮೂಲ ಯಾವುದು ಎಂದು ಕೇಳಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಇಡಿ ತಿಳಿಸಿದೆ.

ಡಿಕೆ ಶಿವಕುಮಾರ್

By

Published : Sep 15, 2019, 12:38 PM IST

ಬೆಂಗಳೂರು: ಪ್ರಭಾವಿ ರಾಜಕಾರಣಿ, ಮಾಜಿ ಸಚಿವ ಡಿಕೆ ಶಿವಕುಮಾರ್ ಹೆಸರಲ್ಲಿ ಇನ್ನೂ ಅಪಾರ ಪ್ರಮಾಣದ ಬೇನಾಮಿ ಆಸ್ತಿ ಇರುವ ಸಾಧ್ಯತೆಗಳಿವೆ ಎಂದು ಜಾರಿ ನಿರ್ದೇಶನಾಲಯ ಶಂಕೆ ವ್ಯಕ್ತಪಡಿಸಿದೆ.

ಡಿಕೆ ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ತಮ್ಮ ಕಸ್ಟಡಿಗೆ ನೀಡುವಂತೆ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಸಲ್ಲಿರುವ ಅರ್ಜಿಯಲ್ಲಿ ಇಡಿ ಈ ಅಂಶವನ್ನು ಪ್ರಸ್ತಾಪಿಸಿದೆ.

ಶಿವಕುಮಾರ್ ಬಳಿ 800 ಕೋಟಿಗೂ ಹೆಚ್ಚಿನ ಮೌಲ್ಯದ ಆಸ್ತಿ ಇದೆ. ಅವರ ಪುತ್ರಿ ಐಶ್ವರ್ಯ ಹೆಸರಲ್ಲಿಯೇ 108 ಕೋಟಿ ರೂ. ಬೆಲೆಬಾಳುವ ಆಸ್ತಿ ಇದೆ. ಈ ಆಸ್ತಿ ಸಂಪಾದನೆಗೆ ಆದಾಯದ ಮೂಲ ಯಾವುದು ಎಂದು ಕೇಳಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಇಡಿ ಅರ್ಜಿಯಲ್ಲಿ ತಿಳಿಸಿದೆ.

ತಮ್ಮ ಬಳಿ ಇರುವ ಆಸ್ತಿಯು ಪಿತ್ರಾರ್ಜಿತವಾಗಿ ಮತ್ತು ಸ್ವಂತ ದುಡಿಮೆಯಿಂದ ಗಳಿಸಿದ್ದಾಗಿ ವಿಚಾರಣೆ ವೇಳೆ ಶಿವಕುಮಾರ್ ತಿಳಿಸಿದ್ದಾರೆ. ಕೆಲವು ಉಡುಗೊರೆ ರೂಪದಲ್ಲಿಯೂ ಬಂದಿದ್ದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಸರಿಯಾದ ವಿವರಣೆ ನೀಡಿಲ್ಲ ಎಂದು ಇಡಿ ಆರೋಪಿಸಿದೆ.

ಈಗಾಗಲೇ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹೊರತಾಗಿಯೂ ಡಿಕೆ ಶಿವಕುಮಾರ್ ಅಪಾರ ಪ್ರಮಾಣದ ಬೇನಾಮಿ ಆಸ್ತಿ ಹೊಂದಿರುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ತನಿಖೆಯ ಅಗತ್ಯತೆ ಇದೆ ಎಂದು ಅರ್ಜಿಯಲ್ಲಿ ಶಂಕಿಸಿದೆ.

ಡಿಕೆ ಶಿವಕುಮಾರ್ ಮತ್ತು ಕುಟುಂಬದ ಸದಸ್ಯರು 20ಕ್ಕೂ ಹೆಚ್ಚಿನ ಬ್ಯಾಂಕ್‌ಗಳಲ್ಲಿ 317 ಖಾತೆಗಳ ಮೂಲಕ ಹೆಚ್ಚಿನ ಪ್ರಮಾಣದ ವ್ಯವಹಾರ ನಡೆಸಿದ್ದು, ಈ ಬಗ್ಗೆ ಸುದೀರ್ಘವಾದ ತನಿಖೆ ನಡೆಸುವ ಅಗತ್ಯತೆ ಇರುವುದನ್ನ ಇಡಿ ನ್ಯಾಯಾಲಯದಲ್ಲಿ ಪ್ರತಿಪಾದಿಸಿದೆ.

ಸಚಿವರಾಗಿದ್ದಾಗ, ಶಾಸಕರಾಗಿದ್ದಾಗ ಶಿವಕುಮಾರ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಜಾರಿ ನಿರ್ದೇಶನಾಲಯ ಕೋರ್ಟ್​​​​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದೆ ಎಂದು ತಿಳಿದುಬಂದಿದೆ.

ABOUT THE AUTHOR

...view details