ಬೆಂಗಳೂರು :ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಿತಿ ಹೇರಿ ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕೋರಿ ಫಿಲ್ಮ್ ಚೇಂಬರ್ ನಿಯೋಗ ಸಿಎಂಗೆ ಮನವಿ ಸಲ್ಲಿಸಿದೆ. ಸಿಎಂ ಬಿಎಸ್ವೈ ಭೇಟಿ ಮಾಡಿದ ಚಿತ್ರರಂಗದ ನಿಯೋಗ, ಥಿಯೇಟರ್ಗಳಲ್ಲಿ ಪೂರ್ಣ ಪ್ರಮಾಣದ ಪ್ರೇಕ್ಷಕರ ಭರ್ತಿಗೆ ಮನವಿ ಮಾಡಿತು.
ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗ ಸಿಎಂರನ್ನು ಭೇಟಿ ಮಾಡಿ ಶೇ.50ರಷ್ಟು ಮಾತ್ರ ಅವಕಾಶ ನೀಡಿದರೆ ನಿರ್ಮಾಪಕರಿಗೆ ನಷ್ಟವಾಗಲಿದೆ. ಹೀಗಾಗಿ, ಪೂರ್ಣ ಪ್ರಮಾಣದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು.