ನೆಲಮಂಗಲ:ಅಗ್ನಿಶಾಮಕ ಮತ್ತು ತುರ್ತು ಸೇವೆಯಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿದ್ದ IPS ಅಧಿಕಾರಿ ಆರ್ ರಮೇಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅತ್ಯಕ್ರಿಯೆ ನೆರವೇರಿತು.
ಸಕಲ ಸರ್ಕಾರಿ ಗೌರವದೊಂದಿಗೆ ಡಿಜಿಪಿ ಆರ್ ರಮೇಶ್ ಅಂತ್ಯಕ್ರಿಯೆ - ನೆಲಮಂಗಲ
ಅಗ್ನಿಶಾಮಕ ಮತ್ತು ತುರ್ತು ಸೇವೆಯಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿದ್ದ IPS ಅಧಿಕಾರಿ ಆರ್ ರಮೇಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅತ್ಯಕ್ರಿಯೆ ನೆರವೇರಿತು.
2005ರ ಸಾಲಿನ IPS ಅಧಿಕಾರಿ ಆರ್ ರಮೇಶ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮೃತ IPS ಅಧಿಕಾರಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮೈಲನಹಳ್ಳಿ ಮೂಲದವರು. ಪ್ರಾಥಮಿಕ ಶಿಕ್ಷಣವನ್ನು ಮೈಲನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕಾಲೇಜ್ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪಡೆದಿದ್ದರು. ಡಿವೈಎಸ್ಪಿಯಾಗಿ ಪೊಲೀಸ್ ಸೇವೆಗೆ ಸೇರಿದರು ಸದ್ಯ ಅವರು DIGP P&M ನಲ್ಲಿ ಹೋಮ್ ಗಾರ್ಡ್ಸ್ ಹಾಗೂ ಸಿವಿಲ್ ಡಿಫೆನ್ಸ್ನಲ್ಲಿ DIG ಯಾಗಿದ್ದರು.
ಮೃತರ ಅಂತಿಮ ಸಂಸ್ಕಾರ ಹುಟ್ಟುರಾದ ಮೈಲಾನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರೆವೇರಿತು. ಅಂತಿಮ ನಮನ ಸಲ್ಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು. ಮೃತ ಆರ್ ರಮೇಶ್ ಪತ್ನಿ ಮತ್ತು ಒಬ್ಬ ಪುತ್ರ ಒಬ್ಬಳು ಮಗಳನ್ನು ಬಿಟ್ಟು ಅಗಲಿದ್ದಾರೆ.