ಬೆಂಗಳೂರು:ಆಂಧ್ರದ ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ದುರಂತ ಅತ್ಯಂತ ದುರದೃಷ್ಟಕರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ವಿಶಾಖಪಟ್ಟಣಂನ ವೆಂಕಟಾಪುರದಲ್ಲಿರುವ ಎಲ್ಜಿ ಪಾಲಿಮರ್ಸ್ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಮಗು ಸೇರಿದಂತೆ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವಿರಾರು ಜನ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.