ಕರ್ನಾಟಕ

karnataka

ETV Bharat / state

ಬಾಲಕಿಯನ್ನು ಒಡಿಶಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಿ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ

ಬಾಲಕಿಯೊಬ್ಬಳನ್ನ ಮನೆಗೆಲಸದಲ್ಲಿ ತೊಡಗಿಸಿ ಆಕೆಯನ್ನು ಶೋಷಿಸಿ ದೌರ್ಜನ್ಯವೆಸಗಿದ ಆರೋಪದಲ್ಲಿ ‘ತಲಾಷ್’ ಸ್ವಯಂ ಸೇವಾ ಸಂಸ್ಥೆ ನೀಡಿದ್ದ ದೂರಿನ ಮೇರೆಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೇ 26ರ ಒಳಗೆ ಒಡಿಶಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಬೇಕು’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಹೈಕೋರ್ಟ್ ನಿರ್ದೇಶಿಸಿದೆ.

ಕರ್ನಾಟಕ ಹೈಕೋರ್ಟ್

By

Published : Feb 23, 2019, 11:51 AM IST

ಬೆಂಗಳೂರು: ನಗರದ ಟೆಕ್ಕಿವೋರ್ವರ ಮನೆಯಲ್ಲಿ ಕೆಲಸಕ್ಕೆ ಇರಿಸಿಕೊಂಡಿದ್ದ 16 ವರ್ಷದ ಬಾಲಕಿಯನ್ನು, ‘ಇದೇ 26ರ ಒಳಗೆ ಒಡಿಶಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಬೇಕು’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಹೈಕೋರ್ಟ್ ನಿರ್ದೇಶಿಸಿದೆ.

ಬಾಲಕಿಯನ್ನು ಮನೆಗೆಲಸದಲ್ಲಿ ತೊಡಗಿಸಿ ಆಕೆಯನ್ನು ಶೋಷಿಸಿ ದೌರ್ಜನ್ಯವೆಸಗಿದ ಆರೋಪದಲ್ಲಿ ‘ತಲಾಷ್’ ಸ್ವಯಂ ಸೇವಾ ಸಂಸ್ಥೆ ನೀಡಿದ್ದ ದೂರಿನ ಮೇರೆಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಲಕಿಯನ್ನು ಮನೆಯಲ್ಲಿರಿಸಿಕೊಂಡಿದ್ದ ಆರೋಪದಡಿ ಟೆಕಿ ಶಿಬು ಪ್ರಸಾದ್ ಪಾದಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ನಂತರ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ತನ್ನ ವಶದಲ್ಲಿರಿಸಿಕೊಂಡಿತ್ತು.‘ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಅಕ್ರಮವಾಗಿ ಬಂಧನದಲ್ಲಿರಿಸಿಕೊಂಡಿದೆ’ ಎಂದು ಆರೋಪಿಸಿ ಆಕೆಯ ಪೋಷಕರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹಾಗೂ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ಹಾಜರಿದ್ದ ವಕೀಲ ಎಸ್. ವಿ. ಗಿರಿಕುಮಾರ್, ‘ಶೋಷಣೆಗೊಳಗಾಗಿದ್ದ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ರಕ್ಷಣೆ ಮಾಡಿ ಪೋಷಿಸುತ್ತಿದೆ. ಇದರಲ್ಲಿ ಯಾವುದೇ ಅಕ್ರಮ ಬಂಧನದ ಪ್ರಶ್ನೆಯೇ ಇಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ABOUT THE AUTHOR

...view details