ಬೆಂಗಳೂರು: ಅಧಿಕಾರಿಗಳು ಪತ್ರಿಕಾ ಗೋಷ್ಠಿ ನಡೆಸುವುದರವಿರುದ್ಧ ನಿರ್ಭಂಧವನ್ನು ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಚ್ಚಾಟ ಸಾರ್ವಜನಿಕವಾಗಿ ಮುನ್ನಲೆಗೆ ಬಂದ ಹಿನ್ನೆಲೆ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಸುತ್ತೋಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಪತ್ರಿಕಾ ಗೋಷ್ಠಿ ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಪ್ರಸಂಗಗಳು ಸರ್ಕಾರದ ಆಡಳಿತ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತವೆ ಹಾಗೂ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡುವುದರಿಂದ ಅಧಿಕಾರಿಗಳ ಇಂತಹ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಅಧಿಕಾರಿಯು ನಂಬಿಕಾರ್ಹ, ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿದೆ.