ಬೆಂಗಳೂರು:ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಆಕ್ಸಿಜನ್ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.
ಪ್ರತಿ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ. ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರ್ಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ ಎಂದರು.