ಬೆಂಗಳೂರು:ಸಾರಿಗೆ ನೌಕರರ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ್ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟದಿಂದ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿದುತ್ತಿದ್ದಾರೆ. ಮುಷ್ಕರ ಕೈ ಬಿಡುವ ವಿಚಾರದಲ್ಲಿ ಸಾರಿಗೆ ನೌಕರರ ನಡುವಲ್ಲೇ ಗೊಂದಲ ಏರ್ಪಟ್ಟಿದೆ. ಇದರಿಂದ ಬಸ್ ಗಳು ರಸ್ತೆಗಿಳಿಯುತ್ತವಾ..? ಇಲ್ಲವಾ..? ಅನ್ನೋ ಗೊಂದಲ ಜನರಲ್ಲೂ ಇದೆ. ಹೀಗಾಗಿ ರಾಜ್ಯ ಸರ್ಕಾರ ಈ ಕೂಡಲೇ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.