ಬೆಂಗಳೂರು : ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆಗೂ, ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಗ್ರಾಪಂ ಚುನಾವಣೆ ಘೋಷಣೆಗೂ, ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಸಿಎಂ - ಗ್ರಾ. ಪಂ.ಚುನಾವಣೆ ಘೋಷಣೆಗೂ, ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ
13:31 November 30
ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ಗ್ರಾಮ ಪಂಚಾಯತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಇಂದಿನಿಂದ ನಾವು ಬೇರೆ ಯಾವುದೇ ಚಟುವಟಿಕೆಗಳನ್ನು ಮಾಡಲ್ಲ. ಸಂಘಟನೆಯತ್ತ ಗಮನ ಕೊಡುತ್ತೇವೆ. ಪಕ್ಷದಿಂದ ಯೋಗ್ಯ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ. ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಮಾಡುತ್ತಿದ್ದೇವೆ ಎಂದರು.
ಲೋಕಸಭೆ, ವಿಧಾನಸಭೆ ಚುನಾವಣೆಯಷ್ಟೇ ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ಮಹತ್ವದ್ದಾಗಿದೆ. ಹಾಗಾಗಿ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕಿದೆ ಎಂದರು.
ಈಗಾಗಲೇ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ತಂಡಗಳು ಪ್ರವಾಸ ಮಾಡುತ್ತಿವೆ. ನಮ್ಮ ಸಂಘಟನೆ ಭದ್ರ ಮಾಡಿಕೊಳ್ಳಲು ಇದು ಉತ್ತಮ ಅವಕಾಶ. ಪಕ್ಷದ ಚಿಹ್ನೆ ಇಲ್ಲದೇ ಇದ್ದರೂ ಕೂಡಾ ಯಾರು ಯಾವ ಅಭ್ಯರ್ಥಿ ಅಂತಾ ಗೊತ್ತೇ ಆಗುತ್ತದೆ ಎಂದರು.