ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ವಿಧಾನ ಪರಿಷತ್ ಚುನಾವಣೆ ಟಿಕೆಟ್ ಕುರಿತು ನಮಗೆ ಬಂದಿರುವ ಅರ್ಜಿಗಳನ್ನು ಹೈಕಮಾಂಡ್ಗೆ ಕಳುಹಿಸಲಾಗಿದ್ದು, ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಈ ವಿಚಾರದಲ್ಲಿ ನಮ್ಮ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಎರಡು ಸ್ಥಾನಕ್ಕೆ 200ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಅಚ್ಚರಿಯ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದರು.