ಬೆಂಗಳೂರು:ಸಹಾಯಕ ಸರಕಾರಿ ಅಭಿಯೋಜಕರ ನೇಮಕದಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಕಳಂಕಿತ 61 ಮಂದಿಯ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಪ್ರಶ್ನೆ ಮಾಡಿದೆ.
ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಮತ್ತು ಸುಧಾ ಕಟ್ಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು ಎಪಿಪಿ ನೇಮಕ ಅಕ್ರಮವನ್ನ 2018ರಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ 61 ಮಂದಿಗೆ ಸರಿಯಾದ ಶಿಕ್ಷೆ ನೀಡಿಲ್ಲ. ಅಧಿಕಾರಿಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, 61 ಮಂದಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮುಂದಿನ ವಿಚಾರಣೆ ವೇಳೆ ತಿಳಿಸಿ ಎಂದು ಹೇಳಿ ವಿಚಾರಣೆ ಮುಂದೂಡಿಕೆ ಮಾಡಿದೆ.