ಕರ್ನಾಟಕ

karnataka

ETV Bharat / state

ಶಿವಸುಬ್ರಹ್ಮಣ್ಯ ದೇವಸ್ಥಾನದ ಆದಾಯ ದುರ್ಬಳಕೆ ಆರೋಪ: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್ - ಶಿವಸುಬ್ರಹ್ಮಣ್ಯ ದೇವಸ್ಥಾನದ ಆದಾಯ ದುರ್ಬಳಕೆ ಆರೋಪ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

ದೇವಸ್ಥಾನದ ಆದಾಯವನ್ನು ಆಡಳಿತ ಮಂಡಳಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಪಿಐಎಲ್ ಸಲ್ಲಿಕೆಯಾಗಿತ್ತು. ತರೀಕೆರೆಯ ಎಂ.ಸಿ.ಹಳ್ಳಿ ನಿವಾಸಿ ವೇಲುಮುರುಗನ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ಬಳಿಕ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

The High Court filed a self-motivated petition alleging temple revenue misappropriation
ಶಿವಸುಬ್ರಹ್ಮಣ್ಯ ದೇವಸ್ಥಾನದ ಆದಾಯ ದುರ್ಬಳಕೆ ಆರೋಪ

By

Published : Nov 9, 2020, 2:29 PM IST

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ತರಿಕೆರೆ ತಾಲೂಕಿನ ಭದ್ರಗಿರಿಯಲ್ಲಿರುವ ಶಿವಸುಬ್ರಹ್ಮಣ್ಯ ದೇವಸ್ಥಾನದ ಆದಾಯವನ್ನು ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್​) ಸಲ್ಲಿಸಿದ್ದ ಅರ್ಜಿದಾರರು ದೇವಸ್ಥಾನದ ಮೇಲೆ ಈ ಹಿಂದೆ ಹಕ್ಕು ಚಲಾಯಿಸಲು ಮುಂದಾಗಿದ್ದರು. ಅದಕ್ಕಾಗಿ ಎರಡು ಬಾರಿ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಿಫಲವಾದ ನಂತರ ಪಿಐಎಲ್ ದಾಖಲಿಸಿದ್ದಾರೆ ಎಂದು ಪ್ರತಿವಾದಿ ಪರ ವಕೀಲರು ಆರೋಪಿಸಿದ ಹಿನ್ನೆಲೆಯಲ್ಲಿ ಹಾಗೂ ದೇವಸ್ಥಾನ ಸಾರ್ವಜನಿಕ ಪ್ರದೇಶದಲ್ಲಿದೆ ಎಂಬ ಕಾರಣಗಳ ಮೇರೆಗೆ ಅರ್ಜಿದಾರರನ್ನು ಪ್ರಕರಣದಿಂದ ಕೈಬಿಟ್ಟು ಸ್ವಯಂ ಪ್ರೇರಿತ ಅರ್ಜಿಯಾಗಿ ಬದಲಾಯಿಸಿಕೊಂಡಿದೆ.

ದೇವಸ್ಥಾನದ ಆದಾಯವನ್ನು ಆಡಳಿತ ಮಂಡಳಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ತರೀಕೆರೆಯ ಎಂ.ಸಿ. ಹಳ್ಳಿ ನಿವಾಸಿ ವೇಲುಮುರುಗನ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿದಾರರು ದೂರುದಾರರಾಗಿದ್ದರೂ ದೇವಸ್ಥಾನದಲ್ಲಿ ಹಿತಾಸಕ್ತಿ ಹೊಂದಿದ್ದಾರೆ. ಹೀಗಾಗಿ ಸ್ವಯಂಪ್ರೇರಿತ ಪಿಐಎಲ್ ಆಗಿ ಬದಲಾಯಿಸಿಕೊಳ್ಳುತ್ತಿರುವುದಾಗಿ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ದೇವಸ್ಥಾನಕ್ಕೆ ವಾರ್ಷಿಕ 65 ಲಕ್ಷಕ್ಕಿಂತ ಹೆಚ್ಚು ಆದಾಯವಿದ್ದು, ಈ ಹಣವನ್ನು ದೇವಸ್ಥಾನದ ಟ್ರಸ್ಟಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ‌.‌‌‌ ರಾಜ್ಯದಿಂದಷ್ಟೇ ಅಲ್ಲದೆ, ಆಂಧ್ರ ಪ್ರದೇಶ‌ ಮತ್ತು ತಮಿಳುನಾಡು ರಾಜ್ಯಗಳಿಂದಲೂ ಹೆಚ್ಚಿನ ಭಕ್ತರು ದೇವಸ್ಥಾಕ್ಕೆ ಬರುತ್ತಾರೆ. ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪದಿಂದಲೂ ಸಾಕಷ್ಟು ಆದಾಯ ಬರುತ್ತದೆ. ಹಣ ದುರ್ಬಳಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ‌ಮುಜರಾಯಿ‌ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ತರಿಕೆರೆ ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ದೇವಸ್ಥಾನಕ್ಕೆ‌ ಸಂಬಂಧಿಸಿದ ಚಂದ್ರಘೋಷ್ ಮತ್ತು ಕಾರ್ತಿಕ್​​​​​​​​​ಗೆ ನೋಟಿಸ್ ಜಾರಿ‌ ಮಾಡಿತ್ತು. ಅಲ್ಲದೇ, ದೇವಸ್ಥಾನ ಮತ್ತು ಸುತ್ತಲಿನ ಕಲ್ಯಾಣ ಮಂಟಪ ಮತ್ತಿತರೆ ಕಟ್ಟಡಗಳನ್ನು ಸರ್ಕಾರಿ ಜಮೀನು ಒತ್ತುವರಿ ಮಾಡಿ ನಿರ್ಮಿಸಿರುವ ಬಗ್ಗೆ ತಹಶೀಲ್ದಾರ್ ಸರ್ಕಾರಕ್ಕೆ ವರದಿ ಸಲ್ಲಿಸಿರುವ ವಿಚಾರವನ್ನು ಪತ್ತೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ 2019ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ವ್ಯಾಪ್ತಿಗೆ ಈ ಪ್ರಕರಣ ಬರುತ್ತದೆಯೋ, ಇಲ್ಲವೋ ಎಂಬುದನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

For All Latest Updates

TAGGED:

ABOUT THE AUTHOR

...view details