ಬೆಂಗಳೂರು :ಕರ್ನಾಟಕ ಹೋಮಿಯೊಪತಿ ಪದ್ಧತಿ ಔಷಧ ಮಂಡಳಿಯ ಚುನಾವಣೆಯಲ್ಲಿ ಭೌತಿಕ ಮತದಾನ ವ್ಯವಸ್ಥೆ ಕಲ್ಪಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಿಗೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಡಾ. ಪ್ರಕಾಶ್ ಮಂಟಿಕೊಪ್ಪ ಸೇರಿ ಮೂವರು ಹೋಮಿಯೊಪತಿ ವೈದ್ಯರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರ ಪರ ವಕೀಲ ದೇವಿಪ್ರಸಾದ್ ಶೆಟ್ಟಿ ವಾದ ಮಂಡಿಸಿ, ಕರ್ನಾಟಕ ಹೋಮಿಯೊಪತಿ ವೈದ್ಯರ ಕಾಯ್ದೆ-1961ರ ಸೆಕ್ಷನ್ 11 ಮತ್ತು 12ರ ಪ್ರಕಾರ ಕರ್ನಾಟಕ ಹೋಮಿಯೋಪತಿ ಪದ್ಧತಿ ಔಷಧ ಮಂಡಳಿಯ ಚುನಾವಣೆಯಲ್ಲಿ ಕೇವಲ ಅಂಚೆ ಮತಪತ್ರ ಮೂಲಕ ಮತದಾನಕ್ಕೆ ಅವಕಾಶವಿದೆ.