ಬೆಂಗಳೂರು : ಡ್ರಗ್ಸ್ ನಿಯಂತ್ರಣಕ್ಕೆ ಕಾನೂನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಸಭೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಗಳು, ಕಾನೂನು ತಜ್ಞರು, ಸೈಬರ್, ಬ್ಯಾಂಕ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ - Bangalore News 2020
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗುವ ಅವ್ಯವಹಾರ, ವಂಚನೆಗಳ ಕುರಿತು ವಿವಿಧ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ ಗಳ ಮುಖ್ಯಸ್ಥರು, ಪ್ರತಿನಿಧಿಗಳ ಜೊತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಭೆ ನಡೆಸುತ್ತಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸುತ್ತಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸೈಬರ್ ತಜ್ಞರು, ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗುವ ಅವ್ಯವಹಾರ, ವಂಚನೆಗಳ ಕುರಿತು ವಿವಿಧ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ಗಳ ಮುಖ್ಯಸ್ಥರು, ಪ್ರತಿನಿಧಿಗಳ ಜೊತೆ ಗೃಹ ಸಚಿವರು ಚರ್ಚೆ ನಡೆಸುತ್ತಿದ್ದಾರೆ.