ಬೆಂಗಳೂರು : ರಾಷ್ಟ್ರೀಯ ಪೌರತ್ವ ಕಾಯ್ದೆ ಅನುಷ್ಟಾನ ಸಂಬಂಧ ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲು ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪೌರತ್ವ ಕಾಯ್ದೆ ಅನುಷ್ಠಾನದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಲು ಬಿಡಲ್ಲ: ರವಿಕುಮಾರ್! - ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸುದ್ದಿ
ರಾಷ್ಟ್ರೀಯ ಪೌರತ್ವ ಕಾಯ್ದೆ ಅನುಷ್ಟಾನ ಸಂಬಂಧ ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲು ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.
![ಪೌರತ್ವ ಕಾಯ್ದೆ ಅನುಷ್ಠಾನದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಲು ಬಿಡಲ್ಲ: ರವಿಕುಮಾರ್! Ravikumar](https://etvbharatimages.akamaized.net/etvbharat/prod-images/768-512-5396172-thumbnail-3x2-dr.jpg)
ಪೌರತ್ವ ಕಾಯ್ದೆ ಅನುಷ್ಠಾನದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಲು ಬಿಡಲ್ಲ: ರವಿಕುಮಾರ್!
ಪೌರತ್ವ ಕಾಯ್ದೆ ಅನುಷ್ಠಾನದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಲು ಬಿಡಲ್ಲ: ರವಿಕುಮಾರ್!
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಷ್ಟ್ರೀಯ ಪೌರತ್ವ ಕಾಯ್ದೆ ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದು, ಅದನ್ನು ಯಥಾವತ್ತಾಗಿ ಜಾರಿಗೊಳಿಸುವುದಾಗಿ ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟವಾಗಿ ಹೇಳಿದ್ದಾರೆ ಅದರಂತೆ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ದೇಶದ ಹಲವೆಡೆ ಪೌರತ್ವ ಬಿಲ್ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ರಾಜ್ಯದಲ್ಲಿ ಅಂತಹ ಸನ್ನಿವೇಶ ಇಲ್ಲ, ಕಾನೂನು ಸುವ್ಯವಸ್ಥೆಗೆ ಏನು ತೊಂದರೆ ಬಾರದಂತೆ ನೋಡಿಕೊಳ್ಳಲಾಗುತ್ತದೆ ಎಂದು ರವಿಕುಮಾರ್ ಸ್ಪಷ್ಟಪಡಿಸಿದರು.