ಕರ್ನಾಟಕ

karnataka

ETV Bharat / state

ನ್ಯಾಯಾಲಯದ ತಡೆಯಾಜ್ಞೆ ಇದ್ರೂ ಪೀಠಾರೋಹಣ ಮಾಡಿದ ಬಿ ಜೆ ಪುಟ್ಟಸ್ವಾಮಿ

ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ನಗರೂರು ಗ್ರಾಮ ಬಡಾವಣೆಯಲ್ಲಿರುವ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಪೀಠಾರೋಹಣ ಹಾಗೂ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ಮಾಜಿ ಸಚಿವ ಬಿ ಜೆ ಪುಟ್ಟಸ್ವಾಮಿ ಪೂರ್ಣಾನಂದ ಪುರಿ ಸ್ವಾಮೀಜಿಯಾಗಿ ಪೀಠಾರೋಹಣ ಮಾಡಿದ್ದಾರೆ..

BJ Puttaswamy Pilgrimage Program
ಪೀಠಾರೋಹಣ ಮಾಡಿದ ಬಿ.ಜೆ. ಪುಟ್ಟಸ್ವಾಮಿ

By

Published : May 15, 2022, 7:32 PM IST

ಬೆಂಗಳೂರು : ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಇದ್ದರೂ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪ್ರಥಮ ಗುರುಗಳ ಪೀಠಾರೋಹಣ ಮಹೋತ್ಸವ ನಡೆದಿದೆ. ಮಾಜಿ ಸಚಿವ ಬಿ ಜೆ ಪುಟ್ಟಸ್ವಾಮಿ ಪೂರ್ಣಾನಂದ ಪುರಿ ಸ್ವಾಮೀಜಿಯಾಗಿ ಪೀಠಾರೋಹಣ ಮಾಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ನಗರೂರು ಗ್ರಾಮ ಬಡಾವಣೆಯಲ್ಲಿರುವ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಬೆಳಗ್ಗೆ 11.50ಕ್ಕೆ ಪೀಠಾರೋಹಣ ಹಾಗೂ ಪಟ್ಟಾಭಿಷೇಕ ಮಹೋತ್ಸವ ನಡೆಯಿತು.

ಕೈಲಾಸ ಆಶ್ರಮದ ಜಯೇಂದ್ರಪುರಿ ಮಹಾಸ್ವಾಮಿಗಳು ದೀಕ್ಷೆ ಬೋಧಿಸಿದರು. ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಂಸದ ಪಿ ಸಿ ಮೋಹನ್ ಪೀಠಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಬಿ.ಜೆ. ಪುಟ್ಟಸ್ವಾಮಿ ಪೀಠಾರೋಹಣ ಕಾರ್ಯಕ್ರಮ

ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಆದರೆ, ಈ ಆದೇಶಕ್ಕೂ ಮಠಕ್ಕೂ ಪೀಠಾರೋಹಣಕ್ಕೂ ಸಂಬಂಧವಿಲ್ಲ, ಪೂರ್ವ ನಿಗದಿಯಂತೆ ಪೀಠಾರೋಹಣ ಸಮಾರಂಭ ನಡೆಯಲಿದೆ ಎಂದು ಬಿಜೆ ಪುಟ್ಟಸ್ವಾಮಿ ಸ್ಪಷ್ಟಪಡಿಸಿದ್ದರು. ಇಂದು ಕಾರ್ಯಕ್ರಮ ನಡೆಸಿ ಪೂರ್ಣಾನಂದ ಪುರಿ ಶ್ರೀ ಹೆಸರಿನಲ್ಲಿ ಪೀಠಾರೋಹಣ ಮಾಡಿದ್ದಾರೆ.

ಇದನ್ನೂ ಓದಿ:ಮೇ 18ರ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುವುದಾಗಿ ತಿಳಿಸುವೆ.. ಸಭಾಪತಿ ಬಸವರಾಜ್​ ಹೊರಟ್ಟಿ

ಜೂನ್ 13ಕ್ಕೆ ವಿಚಾರಣೆ ದಿನಾಂಕ ನಿಗದಿಯಾಗಿದೆ. ಬಿ.ಜೆ.ಪುಟ್ಟಸ್ವಾಮಿ, ಅಖಿಲ ಕರ್ನಾಟಕ ಗಾಣಿಗ ಸಂಘದ ಆಡಳಿತಾಧಿಕಾರಿ ಎಂ.ಪಿ ಮಂಜುನಾಥ್ ಸೇರಿದಂತೆ ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್‌ನ 10 ಮಂದಿ ಟ್ರಸ್ಟಿಗಳು ಮತ್ತು ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ನ್ಯಾಯಾಲಯ ತುರ್ತು ನೋಟಿಸ್ ಜಾರಿ ಮಾಡಿದೆ. ಅಂದು ಪ್ರಕರಣದ ವಿಚಾರಣೆ ನಡೆಯಲಿದ್ದು, ಪುಟ್ಟಸ್ವಾಮಿ ಪೀಠಾರೋಹಣ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಜೊತೆಗೆ ಪೀಠಾರೋಹಣ ನ್ಯಾಯಾಂಗ ನಿಂದನೆಯಾಗಿದೆಯಾ ಎನ್ನುವ ಕುರಿತೂ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ನಾಡಗೀತೆ ಗಾಯನ : ಸಾಮಾನ್ಯವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ನಾಡಗೀತೆ ಹಾಡಲಾಗುತ್ತದೆ. ಪೀಠಾರೋಹಣದಂತಹ ಕಾರ್ಯಕ್ರಮಗಳಲ್ಲಿ ಕೇವಲ ಮಂತ್ರಘೋಷಗಳು ಮೊಳಗುತ್ತವೆ. ಆದರೆ, ಪೂರ್ಣಾನಂದ ಪುರಿ ಶ್ರೀಗಳ ಪೀಠಾರೋಹಣ ಸಮಾರಂಭದಲ್ಲಿ ನಾಡಗೀತೆ ಗಾಯನ ಪ್ರಸ್ತುತಪಡಿಸಿದ್ದು ವಿಶೇಷವಾಗಿತ್ತು.

ಸೆಲ್ಫಿ ವಿತ್ ಬಿಎಸ್​ವೈ :ಇನ್ನು ಪೀಠಾರೋಹಣ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವೇದಿಕೆ ಮೇಲೆ ಯಡಿಯೂರಪ್ಪ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರು ಮುಗಿಬಿದ್ದರು. ಗುಂಪು ಗುಂಪಾಗಿ ಆಗಮಿಸಿದ ಮಹಿಳೆಯರು ಸೆಲ್ಫಿ ತೆಗೆದುಕೊಂಡರು. ಬಿಎಸ್​ವೈ ಎಲ್ಲೆ ಹೋದರೂ ಈ ರೀತಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬೀಳುವ ದೃಶ್ಯ ಸಾಮಾನ್ಯವಾಗಿದೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರೂ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ.

For All Latest Updates

TAGGED:

ABOUT THE AUTHOR

...view details